CHITRADURGA NEWS | 13 AUGUST 2026
ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ₹32 ಸಾವಿರದೊಳಗಿನ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕೆಂಬ ಷರತ್ತನ್ನು ಸರ್ಕಾರ ಕೂಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಒತ್ತಾಯಿಸಿದೆ.
ಇದನ್ನೂ ಓದಿ: ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
ಈ ಸಂಬಂಧ ಸಂಘಟನೆಯ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಚೇರಿ ಸಹಾಯಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಮಾಶಾಸನಗಳನ್ನು ಪಡೆಯುತ್ತಿರುವ ಫಲಾನುಭವಿಗಳು ₹30ರಿಂದ ₹32 ಸಾವಿರದೊಳಗಿನ ಆದಾಯ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸಬೇಕೆಂದು ಷರತ್ತು ವಿಧಿಸಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.
ಈಗಾಗಲೇ ಸಾವಿರಾರು ಬಡ ಫಲಾನುಭವಿಗಳು ಮಾಶಾಸನದ ನೆರವಿನಿಂದ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಹೊಸದಾಗಿ ನಿಬಂಧನೆಗಳು ಹಾಗೂ ಆದಾಯದ ಮಾನದಂಡಗಳನ್ನು ವಿಧಿಸುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಯಾವುದೇ ಕಠಿಣ ಷರತ್ತುಗಳನ್ನು ವಿಧಿಸದೆ ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ಮಾಶಾಸನ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಒತ್ತಾಯಿಸಿದರು.
ಇದನ್ನೂ ಓದಿ: ಸಚಿವರಿಗೆ ಖಾತೆ ಹಂಚಿಕೆ | ಟಿ.ರಘುಮೂರ್ತಿಗೆ ಎಸ್ಟಿ ಕಲ್ಯಾಣ ಖಾತೆ
ಪ್ರತಿಭಟನೆಯಲ್ಲಿ ರುದ್ರಮುನಿ, ಅಂಜಿನಯ್ಯ, ಶಭಿನಾಜಾನ್, ಲೀಲಾವತಿ, ಚಂದ್ರಮ್ಮ, ಗೀತಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

