CHITRADURGA NEWS | 25 JULY 2025
ಚಿತ್ರದುರ್ಗ: ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜು.27ರಂದು ನಗರದ ಪಂಚಚಾರ್ಯ ಕಲ್ಯಾಣ ಮಂಟಪದಲ್ಲಿ ನೌಕರರ ಸಮಾವೇಶ, ನಿವೃತ್ತ ನೌಕರರಿಗೆ, ಸಾಧಕರಿಗೆ ಸನ್ಮಾನ, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಪಿ.ಎಂ.ಜಿ.ರಾಜೇಶ್ ಹೇಳಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್‌ಕುಮಾರ್ ಆಯ್ಕೆ
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಸಹಾ ನಮ್ಮ ಸಂಘದಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ನಡೆಸಲಾಗುತ್ತಿತ್ತು ಕರೋನ ಬಂದ ಹಿನ್ನಲೆಯಲ್ಲಿ ಅದನ್ನು ನಿಲ್ಲಿಸಲಾಗಿತ್ತು ಆದರೆ ಈಗ ನಮ್ಮ ಸಂಘ ಬಂದ ಮೇಲೆ ಪುನಃ ಪ್ರಾರಂಭ ಮಾಡಲಾಗಿದೆ ಎಂದ ಅವರು,
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 2024-25 ನೇ ಸಾಲಿನಲ್ಲಿ ಹಾಗೂ ಎಸ್‍ಎಸ್‍ಎಲ್.ಸಿ ಮತ್ತು ಪಿಯುಸಿ ವ್ಯಾಸಂಗ ಮಾಡಿ ಶೇ. 80, ಅದಕ್ಕಿಂತ ಅಧಿಕ ಅಂಕ ಪಡೆದ ಜಿಲ್ಲಾ ಅನುದಾನಿತ ಮತ್ತು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ, ಇದರಲ್ಲಿ ಪರಿಸರ ಸ್ನೇಹಿ ಕಿಟ್, ಪ್ರಮಾಣ ಪತ್ರ, ಫಲಕ, ರೂ.1000 ನಗದು ವಿತರಣೆ ಮಾಡಲಾಗುವುದು.
ಇಲ್ಲಿಯವರೆಗೆ 85 ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು, 80 ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
ಯಾವುದಾದರು ನೌಕರರ ಮಕ್ಕಳು ಅನಿವಾರ್ಯ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ನೇರವಾಗಿ ತಂದೆ, ತಾಯಿಯವರ ಇಲಾಖಾ ಗುರುತಿನ ಚೀಟಿ ಮತ್ತು ವಿದ್ಯಾರ್ಥಿಯ ಅಂಕಪಟ್ಟಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾದರೆ ಅಂತಹ ಮಕ್ಕಳಿಗೂ ಸಹ ಪುರಸ್ಕರಿಸಲಾಗುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
2024 ಮೇ 31 2024 ರಿಂದ 2025 ಜೂನ್ 30ರವರೆಗೆ ನಿವೃತ್ತಿಯಾಗಿರುವ ಯಾವುದೇ ಇಲಾಖೆಯ ಸಮುದಾಯದ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು.
ಸಮುದಾಯದ ಜಿಲ್ಲೆಯೊಳಗಿನ ವಿಶೇಷ ಸಾಧನೆಗೈದ 5 ಜನ ಸಾಧಕರಾದ ಕೆ.ಎಲ್.ಸಚಿನ್, ಕೆ.ಎನ್.ಮಲ್ಲಿಕಾರ್ಜನ್, ಎ.ಎಸ್ ಸತೀಶ್, ಜೆ.ಆರ್.ಶಂಕರಪ್ಪ, ಟಿ.ಪಿ.ಉಮೇಶ್ ಇವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಿ ಗೌರವಿಸಲಾಗುವುದು.
ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ್ ಸ್ವಾಮಿಜಿ, ದಾವಣಗೆರೆ ವಿರಕ್ತಮಠದ ಡಾ.ಬಸವ ಪ್ರಭು ಸ್ವಾಮಿಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ವಿರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಎಸ್.ಕೆ..ಬಸವರಾಜನ್, ಜಿಲ್ಲಾ ಕೆ.ಡಿ.ಪಿ ಸದಸ್ಯ ಕೆ.ಸಿ.ನಾಗರಾಜ್, ಕಾಂಗ್ರೆಸ್ ಮುಖಂಡ ಹನುಮಲಿ ಷಣ್ಮುಖಪ್ಪ, ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಪಿ.ವಿರೇಂದ್ರ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಕಾರ್ಯದರ್ಶಿ ಶಶಿಧರ್ ಬಾಬು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವಿರೇಶ್ ಕಸಾಪದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಸೆಲೆನಿಯಮ್ ಸೇವನೆಯಿಂದ ಚರ್ಮಕ್ಕಾಗುವ ಪ್ರಯೋಜನವೇನು?
ಕಾರ್ಯಕ್ರಮದಲ್ಲಿ ಹಿರಿಯೂರಿನ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಉಪನ್ಯಾಸ ನೀಡಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ವಿರೇಶ್, ಕಾರ್ಯಾದ್ಯಕ್ಷ ಎಂ.ಬಿ.ಕೊಟ್ಟೂರೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ಅಜಯ್ ಕುಮಾರ್, ಜಿಲ್ಲಾ ಖಂಜಾಚಿ ಡಿ.ಬಹುಗುಣ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
