CHITRADURGA NEWS | 22 AUGUST 2025
ಚಳ್ಳಕೆರೆ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಳ್ಳಕೆರೆಯ ಹಳೇ ಟೌನ್ ವೀರಭದ್ರಸ್ವಾಮಿ ದೇವಸ್ಥಾನದ ಬಳಿಯಿರುವ ಶಾಸಕರ ಮನೆಗೆ ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಂದನಾ ಪಾಪಿ | SP ರಂಜಿತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?
ಅಕ್ರಮ ಆಸ್ತಿ, ತೆರಿಗೆ ವಂಚನೆ ಆರೋಪದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ.
ಚಳ್ಳಕೆರೆ ನಗರದಲ್ಲಿನ ಶಾಸಕ ಕೆ.ಸಿ. ವೀರೇಂದ್ರ(ಪಪ್ಪಿ) ನಿವಾಸ, ಶಾಸಕರ ಸಹೋಧರರಾದ ಕೆ.ಸಿ.ನಾಗರಾಜ್, ಕೆ.ಸಿ.ಸ್ವಾಮಿ ಅವರ ಮನೆಯ ಮೇಲೂ ದಾಳಿಯಾಗಿದೆ.
ಇದನ್ನೂ ಓದಿ: ಸರ್ವೇಯರ್ ಲೋಕಾಯುಕ್ತ ಬಲೆಗೆ | ಹತ್ತು ಸಾವಿರ ಲಂಚ ಪಡೆಯುವಾಗ ರೈಡ್
ದೆಹಲಿಯಿಂದ ಅಧಿಕಾರಿಗಳ ತಂಡ ಏಳು ಖಾಸಗಿ ವಾಹನಗಳಲ್ಲಿ ಆಗಮಿಸಿ ಪರಿಶೀಲನೆ ಕೈಗೊಂಡಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

