CHITRADURGA NEWS | 17 MARCH 2024
ಚಿತ್ರದುರ್ಗ: ಸಾರ್ವತ್ರಿಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನಲೆಯಲ್ಲಿ ಶ್ರೀ.ರೇಣುಕಾಚಾರ್ಯ, ಶ್ರೀ.ಯೋಗಿನಾರೇಯಣ ಯಂತೀಂದ್ರ (ಕೈವಾರ ತಾತಯ್ಯ), ಶ್ರೀ.ಅಗ್ನಿಬನ್ನಿರಾಯ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.
ಇದನ್ನೂ ಓದಿ: ಮೀನುಗಾರಿಕೆ ಸಲಕರಣೆ ಕಿಟ್ ಗೆ ಅರ್ಜಿ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಯಂತಿಗಳ ಆಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಭಾವಚಿತ್ರ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ಅಥವಾ ನಗರಸಭೆ ಸಭಾಂಗಣದಲ್ಲಿ ಜಯಂತಿ ಆಚರಣೆಯನ್ನು ಏರ್ಪಡಿಸಲಾಗುವುದು. ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗದ ಮತದಾರರೇ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ
ವೀರಶೈವ ಮುಖಂಡರ ಮನವಿಯಂತೆ ಮಾರ್ಚ್ 23 ರ ಬದಲಾಗಿ ಮಾರ್ಚ್ 22 ರಂದು ಶ್ರೀ.ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯತು. ಮಾರ್ಚ್ 25 ರಂದು ಶ್ರೀ.ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ), ಮಾರ್ಚ್ 28 ಶ್ರೀ.ಅಗ್ನಿಬನ್ನಿರಾಯ ಜಯಂತಿಗಳನ್ನು ಆಚರಿಸಲಾಗುವುದು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್, ಪೋಲಿಸ್ ಇಲಾಖೆಯ ಸಿಪಿಐ ಗುಡ್ಡಪ್ಪ, ತೋಟಗಾರಿಕೆ ಇಲಾಖೆಯ ಅಧಿಕಾರಿ ಸಿದ್ದೇಶ್, ಮುಖಂಎ ಜಿತೇಂದ್ರ ಹುಲಿಕುಂಟೆ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಉಪಸ್ಥಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
