Connect with us

    English; ಇಂಗ್ಲಿಷ್ ಶಿಕ್ಷಕರ ಕಾರ್ಯಾಗಾರ | ಸಂವಹನ ಸಾಮರ್ಥ್ಯ ಬೆಳೆಸಲು ಕರೆ

    ನಗರದ ಡಯಟ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧಿಸುವ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

    ಮುಖ್ಯ ಸುದ್ದಿ

    English; ಇಂಗ್ಲಿಷ್ ಶಿಕ್ಷಕರ ಕಾರ್ಯಾಗಾರ | ಸಂವಹನ ಸಾಮರ್ಥ್ಯ ಬೆಳೆಸಲು ಕರೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 30 SEPTEMBER 2024

    ಚಿತ್ರದುರ್ಗ: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್‌)ಯಲ್ಲಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ(English) ಮಾಧ್ಯಮದಲ್ಲಿ ಬೋಧಿಸುತ್ತಿರುವ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ(Workshop) ಹಮ್ಮಿಕೊಳ್ಳಲಾಗಿತ್ತು.

    ಕ್ಲಿಕ್ ಮಾಡಿ ಓದಿ: ksrtc bus accident: ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ | ಪ್ರಯಾಣಿಕರ ರಕ್ಷಣೆಗೆ ಮುಂದಾದ ಸ್ಥಳೀಯರು

    ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಇಂಗ್ಲಿ಼ಷ್ ಭಾಷೆಯಲ್ಲಿ ಸಂವಹನ ಸಾಮರ್ಥ್ಯ ಬೆಳೆಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

    ವಿದ್ಯಾರ್ಥಿಗಳಿಗೆ ಭಾಷೆಯನ್ನು ಯಾಂತ್ರಿಕವಾಗಿ ಕಲಿಸದೆ ಭಾಷಾ ಕೌಶಲ್ಯಗಳಾದ ಆಲಿಸುವ, ಮಾತನಾಡುವ, ಓದುವ ಮತ್ತು ಬರೆಯುವ ಕೌಶಲ್ಯಗಳಲ್ಲಿ ಸಾಮರ್ಥ್ಯ ಬೆಳೆಸಬೇಕು.

    ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಸಜ್ಜುಗೊಳಿಸಲು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ಸಾಮರ್ಥ್ಯ ಗಳಿಸಲು ಮಾರ್ಗದರ್ಶನ ಮಾಡಬೇಕು ಎಂದು ಸಲಹೆ ನೀಡಿದರು.

    ನೋಡಲ್ ಅಧಿಕಾರಿ ಅಶ್ವಥ್ ನಾರಾಯಣ ಮಾತನಾಡಿ, ಇಂಗ್ಲಿಷ್ ಭಾಷೆಯ ಕಲಿಕೆ ಅಗತ್ಯವಾಗಿದ್ದು, ಕನ್ನಡ ಭಾಷೆಯ ಜತೆಗೆ ಪ್ರಾಥಮಿಕ ಹಂತದಲ್ಲಿ ಮೂಲ ಕೌಶಲಗಳಲ್ಲಿ ಸಾಮರ್ಥ್ಯ ಪಡೆಯಲು ಮಕ್ಕಳಿಗೆ ಮಾರ್ಗದರ್ಶನ ನೀಡಬೇಕು.

    ಕ್ಲಿಕ್ ಮಾಡಿ ಓದಿ: Death news: ಸಾವಿನಲ್ಲೂ ಒಂದಾದ ದಂಪತಿ | ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ನಿಧನ

    ಶಿಕ್ಷಕರು ಕಲಿಕಾರ್ಥಿಯನ್ನು ಕಲಿಕೆಗೆ ಪ್ರೇರೇಪಿಸುವದರ ಜೊತೆಗೆ ಆತ್ಮವಿಶ್ವಾಸದಿಂದ ಸಂವಹನ ನಡೆಸಲು ಚಟುವಟಿಕೆಗಳು, ಕಲಿಕಾ ಸಾಮಗ್ರಿಗಳನ್ನು ಬಳಸಬೇಕು ಎಂದರು.

    ಕಾರ್ಯಾಗಾರದಲ್ಲಿ ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರ, ಗಿರಿಜಾ, ಉಪನ್ಯಾಸಕರಾದ ಅರ್ಜುಮಂದ್ ಬಾನು, ರೇವಣ್ಣ, ಎಸ್.ಬಸವರಾಜು, ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ್, ರಂಜಿತಾ, ಮಲ್ಲಿಕಾರ್ಜುನ, ನಾಗರತ್ನ, ಅನಿಲ್ ಸೇರಿದಂತೆ ಶಿಕ್ಷಕರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top