CHITRADURGA NEWS | 16 SEPTEMBER 2026
ಚಿತ್ರದುರ್ಗ: ಶಿಕ್ಷಕರು ಬೋಧನೆಯಲ್ಲಿ ವಿವಿಧ ಕಲಿಕಾ ಸಾಮಗ್ರಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮಕ್ಕಳಿಗೆ ಅನುಭವಾತ್ಮಕ ಕಲಿಕಾ ವಾತಾವರಣ ಕಲ್ಪಿಸಿದರೆ ಅವರ ಕಲಿಕಾ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಚಿತ್ರದುರ್ಗ ಡಯಟ್ನ ಉಪನ್ಯಾಸಕ ಎಸ್. ಬಸವರಾಜು ಹೇಳಿದರು.
ಇದನ್ನೂ ಓದಿ:
ಚಳ್ಳಕೆರೆ ತಾಲೂಕಿನ ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಪೂರ್ವ ಪ್ರಾಥಮಿಕ ಶಿಕ್ಷಣ, ಮಕ್ಕಳ ಕಲಿಕೆ, ದ್ವಿಭಾಷಾ ತರಗತಿ ನಿರ್ವಹಣೆ ಹಾಗೂ ಮೌಲ್ಯ ಶಿಕ್ಷಣ ವಿಷಯಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಮನೆ ಅಥವಾ ಕಟ್ಟಡ ನಿರ್ಮಿಸಲು ಭದ್ರ ಬುನಾದಿ ಅಗತ್ಯವಿರುವಂತೆ, ಮಕ್ಕಳು ಉನ್ನತ ಶಿಕ್ಷಣದಲ್ಲಿ ಉತ್ತಮ ಪ್ರಗತಿ ಸಾಧಿಸಲು ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ಕೆಜಿ ಮತ್ತು ಯುಕೆಜಿ) ಭದ್ರ ಬುನಾದಿ ಒದಗಿಸುತ್ತದೆ. ಈ ಹಂತದಲ್ಲಿ ಮಕ್ಕಳಲ್ಲಿ ಕುತೂಹಲ, ಕಲಿಕಾ ಆಸಕ್ತಿ ಹಾಗೂ ಬೌದ್ಧಿಕ ಸಾಮರ್ಥ್ಯ ಹೆಚ್ಚಾಗಿರುತ್ತದೆ. ಆದ್ದರಿಂದ ಶಿಕ್ಷಕರು ತರಗತಿ ಕೊಠಡಿಯಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಣ ಇಲಾಖೆಯಿಂದ ಒದಗಿಸಿರುವ ‘ಬಾಲಚೇತನ-1 ಮತ್ತು 2’ ಚಟುವಟಿಕೆ ಆಧಾರಿತ ಪುಸ್ತಕಗಳನ್ನು ಬಳಸುವುದರ ಜತೆಗೆ ಕಥೆ, ಹಾಡು, ಚಿತ್ರಗಳು ಹಾಗೂ ವಿವಿಧ ಮಾದರಿಗಳ ಮೂಲಕ ಬೋಧನೆ ಮಾಡಿದರೆ ಮಕ್ಕಳ ಕಲಿಕಾ ಸಾಮರ್ಥ್ಯ ಮತ್ತಷ್ಟು ವೃದ್ಧಿಯಾಗುತ್ತದೆ ಎಂದರು.
ಇದನ್ನೂ ಓದಿ:
ಶಿಕ್ಷಕರ ಕ್ರಿಯಾಶೀಲತೆ ಹಾಗೂ ಚಟುವಟಿಕೆ ಆಧಾರಿತ ಬೋಧನೆಯಿಂದ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳ ಕಲಿಕೆ ಉತ್ತಮವಾಗಿರುವುದಕ್ಕೆ ಬಸವರಾಜು ಮೆಚ್ಚುಗೆ ವ್ಯಕ್ತಪಡಿಸಿದರು.
ಸಿಆರ್ಪಿ ಮಂಜಣ್ಣ, ಮುಖ್ಯ ಶಿಕ್ಷಕ ಡಿ. ಮಹಲಿಂಗಪ್ಪ, ಶಿಕ್ಷಕರಾದ ಮೇಘನಾ, ದೀಪಿಕಾ, ಎಂ.ಜಿ. ಶಶಿಕಲಾ, ಶಿಲ್ಪಾ, ರೂಪ, ಪ್ರಭಾಕರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

