ಭಾರತ-ಪಾಕ್‌ ಸಮರ | ವಿವಿ ಸಾಗರ ಜಲಾಶಯ ಪ್ರವಾಸಕ್ಕೆ ಪ್ರವೇಶ ನಿಷೇಧ | ಡ್ಯಾಂ ಭದ್ರತೆಗೆ ಯೋಜನೆ

ವಾಣಿವಿಲಾಸ ಸಾಗರ ಜಲಾಶಯ

CHITRADURGA NEWS | 10 MAY 2025

ಚಿತ್ರದುರ್ಗ: ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಣೆಕಟ್ಟು, ಜಲಾಶಯಗಳಿಗೆ ಭದ್ರತೆ ಒಸಗಿಸಲು ಸೂಚನೆ ನೀಡಿದ್ದಾರೆ.

ಭಾರತ-ಪಾಕಿಸ್ಥಾನ ಮಧ್ಯೆ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆಗೆ ವಿಶ್ವೇಶ್ವರಯ್ಯ ಜಲ ನಿಗಮದಿಂದ ಪೊಲೀಸ್‌ ಇಲಾಖೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಆರೋಪಿ ಕಾಲಿಗೆ ಗುಂಡು | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ | ಸೀಬಾರ ಬಳಿ ಘಟನೆ

ಈಗಾಗಲೇ ಸಾರ್ವಜನಿಕರು ಪ್ರವೇಶಿಸುವ ಗೇಟ್‌ ಬಂದ್‌ ಮಾಡಿ, ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಬೋರ್ಡ್‌ ಹಾಕಲಾಗಿದೆ.

ವಾಣಿವಿಲಾಸ ಸಾಗರ ಪ್ರವೇಶಕ್ಕೆ ನಿಷೇಧ

ವಿಐಪಿ ಗೇಟ್‌ ಸೇರಿದಂತೆ ಎಲ್ಲವನ್ನೂ ಬಂದ್‌ ಮಾಡಿ, ಇಡೀ ಜಲಾಶಯಕ್ಕೆ ಭದ್ರತೆ ಒದಗಿಸಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ಆಪರೇಷನ್‌ ಸಿಂದೂರ್ ಯಶಸ್ವಿಯಾಗಲೆಂದು ಬಿಜೆಪಿ ವಿಶೇಷ ಪೂಜೆ

ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಪ್ರತಿಕ್ರಿಯಿಸಿದ್ದು, ಜಲಾಶಯಕ್ಕೆ ಭದ್ರತೆ ಒದಗಿಸಲು ಮನವಿ ಮಾಡಲಾಗಿದೆ. ಎಷ್ಟು ಸಿಬ್ಬಂದಿ ನಿಯೋಜನೆ ಮಾಡಬೇಕು ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಒಂದೆರಡು ದಿನಗಳಲ್ಲಿ ಸಂಪೂರ್ಣ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version