
ಚಿತ್ರದುರ್ಗ ನ್ಯೂಸ್.ಕಾಂ: ಸಮುದಾಯಗಳ ಅಭಿವೃದ್ಧಿ, ಅಲ್ಲಿರುವ ಬಡವರು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ನಿಗಮ ಮಂಡಳಿಗಳನ್ನು ರಚನೆ ಮಾಡುತ್ತದೆ.
ರಾಜ್ಯದಲ್ಲಿ ಈಗಾಗಲೇ ಒಕ್ಕಲಿಗ, ವೀರಶೈವ ಲಿಂಗಾಯತ, ಉಪ್ಪಾರ, ವಾಲ್ಮೀಕಿ, ದೇವರಾಜ ಅರಸು, ಗೊಲ್ಲ, ಭೋವಿ, ಅಂಬೇಡ್ಕರ್, ಆದಿಜಾಂಬವ ಹೀಗೆ ಹಲವು ನಿಗಮಗಳಿವೆ. ಈ ಸಂಸ್ಥೆಗಳ ಮೂಲಕ ಸಮುದಾಯದ ಸಣ್ಣಪುಟ್ಟವರನ್ನು ಗುರುತಿಸಿ ಅವರಿಗೆ ಸೌಲಭ್ಯ ಕೊಡುವುದು ಸುಲಭವಾಗಲಿದೆ.
ಅದೇ ರೀತಿಯಲ್ಲಿ ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟಿರುವ ಕುರುಬ ಸಮಾಜದ ಅಭಿವೃದ್ಧಿಗೂ ಒಂದು ನಿಗಮ ಸ್ಥಾಪಿಸಬೇಕು ಎಂದು ನ್ಯಾಯವಾದಿ ಹಾಗೂ ಪ್ರದೇಶ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷೆ ಆರ್.ರಜನಿ ಲೇಪಾಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಹ್ಯಾಂಡ್‍ಬಾಲ್ ಅಂಕಣಕ್ಕೆ ಇಳಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಕುರುಬ ಸಮಾಜ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಸಾಕಷ್ಟು ಹಿಂದುಳಿದಿದೆ. ರಾಜ್ಯದ ಕಟ್ಟ ಕಡೆಯ ಕುರುಬ ಸಮಾಜದ ಅಭಿವೃದ್ಧಿಗೆ ಕುರುಬರ ಅಭಿವೃದ್ಧಿ ಮಂಡಳಿಯ ಅವಶ್ಯಕತೆಯಿದೆ ಎಂದು ಪ್ರತಿಪಾದಿಸಿದ್ದಾರೆ.
ಈಗಾಗಲೇ ಬೇರೆ ಬೇರೆ ಜಾತಿ, ವರ್ಗಗಳಿಗೆ ನಿಗಮ ಮಂಡಳಿಗಳನ್ನು ಸ್ಥಾಪಿಸಿ ಸರ್ವ ಜನಾಂಗದ ಅಭಿವೃದ್ಧಿಗೆ ಹಿಂದಿನ ಹಾಗೂ ಈಗಿನ ಸರ್ಕಾರಗಳು ಅಡಿಗಲ್ಲು ಹಾಕಿವೆ. ತಾವೂ ಕೂಡಾ ಎರಡು ಬಾರಿ ಮುಖ್ಯಮಂತ್ರಿಯಾಗುವ ಮೂಲಕ ನಾಡಿನ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಯೋಜನೆಗಳನ್ನು ಜಾರಿ ಮಾಡಿದ್ದೀರಿ.
ಪ್ರಸ್ತುತ ಬಾಕಿ ಉಳಿದಿರುವ ಏಕೈಕ ಅಭಿವೃದ್ಧಿ ನಿಗಮ ಕುರುಬ ಸಮಾಜ ಅಭಿವೃದ್ಧಿ ನಿಗಮ. ಆದ್ದರಿಂದ ತಕ್ಷಣವೇ ರಾಜ್ಯದ ಕುರುಬ ಸಮಾಜದ ಹಿತದೃಷ್ಟಿಯಿಂದ ಕನಕ ಜಯಂತಿ ದಿನವೇ ಘೋಷಣೆ ಮಾಡಬೇಕು. ಅಥವಾ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಸೌಲಭ್ಯ ಕಲ್ಪಿಸಬೇಕು ಎಂದು ಕುರುಬ ಸಮಾಜದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
