CHITRADURGA NEWS | 05 JULY 2026
ಚಿತ್ರದುರ್ಗ: ಜಿಲ್ಲೆಯಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಹಿಂದೆ ಇದ್ದ ವ್ಯವಸ್ಥೆಯನ್ನು ಪರಾಮರ್ಶಿಸಿ, ಎಲ್ಲಿ ಅಗತ್ಯವಿದೆಯೋ ಅಲ್ಲಿ ತಕ್ಷಣವೇ ಇವುಗಳನ್ನು ಕಾರ್ಯಗತಗೊಳಿಸಲು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಪ್ರಕೃತಿ ವಿಕೋಪದ ನಿರ್ವಹಣೆಗಾಗಿ ಎನ್‌ಡಿಆರ್‌ಎಫ್ ಅನುದಾನವನ್ನು ಮುಂಚಿತವಾಗಿಯೇ ಕಾಯ್ದಿರಿಸಿಕೊಂಡು ಬಳಸಿಕೊಳ್ಳಬೇಕು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು.
ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ | ಡಾ.ಜಿ.ಪರಮೇಶ್ವರ್
ಹವಾಮಾನ ವೈಪರೀತ್ಯ ಹಾಗೂ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲೂ ಚಿತ್ರದುರ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಚಿಕೂನ್ ಗುನ್ಯಾ ಪ್ರಕರಣಗಳು ದಾಖಲಾಗುತ್ತಿರುವುದರಿಂದ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಈ ಕುರಿತು ತೀವ್ರ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
