CHITRADURGA NEWS | 24 APRIL 2026
ಚಿತ್ರದುರ್ಗ: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಶೇ 93.85ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 114 ವಿದ್ಯಾರ್ಥಿನಿಯರಲ್ಲಿ 107 ಮಂದಿ ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ: SSLC RESULT | ಚಿತ್ರದುರ್ಗ ಜಿಲ್ಲೆಗೆ ಜಿಲ್ಲೆ ಶೇ.92.25 ರಷ್ಟು ಫಲಿತಾಂಶ
ಉತ್ತೀರ್ಣರಾದವರಲ್ಲಿ 10 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 41 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, 27 ವಿದ್ಯಾರ್ಥಿನಿಯರು ದ್ವಿತೀಯ ದರ್ಜೆ ಹಾಗೂ 29 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ.
ಈ ಬಾರಿ ರಾಜ್ಯದ ಸರಾಸರಿ ಫಲಿತಾಂಶ ಶೇ 94.1ರಷ್ಟಿದ್ದರೆ, ಜಿಲ್ಲೆಯ ಸರಾಸರಿ ಶೇ 92.25ರಷ್ಟಿದೆ. ಶಾಲೆಯ ಈ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

