ಮುಖ್ಯ ಸುದ್ದಿ
BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ

Published on
CHITRADURGA NEWS | 04 JUNE 2024
ಚಿತ್ರದುರ್ಗ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ರೋಚಕ ಗೆಲುವು ಸಾಧಿಸಿದ್ದಾರೆ.
ಎರಡನೇ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಗೋವಿಂದ ಕಾರಜೋಳ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಮಣಿಸಿದ್ದಾರೆ. ಈ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಹಣಾಹಣಿ ಎದುರಿಸಿದ ಗೋವಿಂದ ಕಾರಜೋಳ 677041 ಮತ ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 630451 ಮತ ಪಡೆದುಕೊಂಡರು. ಬಿಜೆಪಿ ಬರೋಬ್ಬರಿ 46590 ಮತಗಳ ಅಂತರದಿಂದ ಗೆದ್ದು ಬೀಗಿದೆ.
ಇದೇ ಮೊದಲನೆ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಗೋವಿಂದ ಕಾರಜೋಳ ಚಿತ್ರದುರ್ಗದ ಮೂಲಕ ಲೋಕಸಭೆ ಪ್ರವೇಶ ಮಾಡುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 46590 ಮತಗಳನ್ನು ಪಡೆಯುವ ಮೂಲಕ ಸತತ ಎರಡನೇ ಅವಧಿಗೆ ಪರಾಭವಗೊಂಡಿದ್ದಾರೆ
Continue Reading
Related Topics:BJP, BN Chandrappa, Chitradurga, congress, Govinda Karajola, Lok Sabha Elections, victory, ಕಾಂಗ್ರೆಸ್, ಗೆಲುವು, ಗೋವಿಂದ ಕಾರಜೋಳ, ಚಿತ್ರದುರ್ಗ, ಬಿ.ಎನ್.ಚಂದ್ರಪ್ಪ, ಬಿಜೆಪಿ, ಲೋಕಸಭಾ ಚುನಾವಣೆ

Click to comment