
CHITRADURGA NEWS | 22 SEPTEMBER 2025
ಚಿತ್ರದುರ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಶಿವಸ್ವಾಮಿ ಅವರ ಉಪಸ್ಥಿತಿಯಲ್ಲಿ ಚಿತ್ರದುರ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ವಿ.ಎಲ್.ಪ್ರಶಾಂತ್‍ರವರು ತಮ್ಮ ಸಮಿತಿಗೆ ನೂತನವಾಗಿ ಕಾರ್ಯಕಾರಿ ಸಮಿತಿಯನ್ನು ನೇಮಕ ಮಾಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಚಿವರಿಂದ ಚಾಲನೆ
ಗೌರವ ಕಾರ್ಯದರ್ಶಿಗಳಾಗಿ ಎಂ.ಕೆ.ಹರೀಶ್, ಎಸ್.ಟಿ.ಬಸವರಾಜ್, ಗೌರವ ಕೋಶಾಧ್ಯಕ್ಷರಾಗಿ ಆರ್. ಮಹಂತೇಶ್, ಮಹಿಳಾ ಪ್ರತಿನಿಧಿಗಳಾಗಿ ರಜನಿ ಲೇಪಾಕ್ಷ, ಸೌಮ್ಯ ಕಿರಣ್, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಸಿ.ಎಂ.ಚಂದ್ರಶೇಖರ್, ಟಿ.ಹಿಮಂತ್ ರಾಜ್, ಪರಿಶಿಷ್ಟ ಪಂಗಡದ ಪ್ರತಿನಿಧಿಯಾಗಿ ಓ.ಉಪೇಂದ್ರ ಕುಮಾರ್, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಪ್ರತಾಪ್ ಜೋಗಿ, ಅಲ್ಪ ಸಂಖ್ಯಾತರ ಪ್ರತಿನಿಧಿಯಾಗಿ ಮೋಹಿದ್ದೀನ್ ಖಾನ್ ಮತ್ತು ಸಂಘ, ಸಂಸ್ಥೆಗಳ ಪ್ರತಿನಿಧಿಯಾಗಿ ಸಿ.ರವಿ ಅವರನ್ನು ನೇಮಕ ಮಾಡಲಾಗಿದೆ ಎಂದು ವಿ.ಎಲ್.ಪ್ರಶಾಂತ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
