By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    53 minutes ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    2 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    3 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    8 hours ago
    ನಾಯಕನಹಟ್ಟಿ ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ
    ನಾಯಕನಹಟ್ಟಿ ಹಟ್ಟಿ ತಿಪ್ಪೇರುದ್ರಸ್ವಾಮಿ ಹುಂಡಿಯಲ್ಲಿ 80.84 ಲಕ್ಷ ಸಂಗ್ರಹ 
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    11 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    12 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    1 day ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    2 days ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    2 days ago
Reading: EXCLUSIVE – ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು | ಯಾರಾಗಲಿದ್ದಾರೆ ಜಿಲ್ಲೆಗೆ ಸಾರಥಿ | ಯಾರೆಲ್ಲಾ ಆಕಾಂಕ್ಷಿಗಳು..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

EXCLUSIVE – ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯ ಕಸರತ್ತು | ಯಾರಾಗಲಿದ್ದಾರೆ ಜಿಲ್ಲೆಗೆ ಸಾರಥಿ | ಯಾರೆಲ್ಲಾ ಆಕಾಂಕ್ಷಿಗಳು..?

chitradurganews.com
Last updated: 24 November 2023 10:29
chitradurganews.com
2 years ago
Share
ಯಾರಾಗಲಿದ್ದಾರೆ ಜಿಲ್ಲೆಗೆ ಸಾರಥಿ
ಯಾರಾಗಲಿದ್ದಾರೆ ಜಿಲ್ಲೆಗೆ ಸಾರಥಿ
SHARE

ಚಿತ್ರದುರ್ಗ ನ್ಯೂಸ್.ಕಾಂ: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಬಿಜೆಪಿಯಲ್ಲಿ ಮೋಡ ಮುಸುಕಿದ ವಾತಾವಣ ನಿರ್ಮಾಣವಾಗಿತ್ತು. ಸರ್ಕಾರ ರಚನೆಯಾಗಿ 6 ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನೇ ನೇಮಕ ಮಾಡಿರಲಿಲ್ಲ. ಕಾರ್ಯಕರ್ತರು ಕೂಡಾ ಪೂರಾ ಹತಾಶರಾಗಿದ್ದರು.

ಆದರೆ, ಕಳೆದ 15 ದಿನಗಳಿಂದ ಪಕ್ಷದಲ್ಲಿ ಮತ್ತೆ ಲವಲವಿಕೆಯ ವಾತಾವರಣ ಮನೆ ಮಾಡಿದೆ. ರಾಜ್ಯದಿಂದ ಜಿಲ್ಲಾ, ತಾಲೂಕು ಹಂತದವರೆಗೆ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಕಾರಣ ಪಕ್ಷದ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ.

ಇದನ್ನೂ ಓದಿ: ಕಾರಿನಲ್ಲಿದ್ದ ಹತ್ತು ಲಕ್ಷ ಕಳ್ಳತನ

ಕಳೆದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರಾವಧಿ ಪೂರ್ಣಗೊಳಿಸಲು ಬಿಡಲಿಲ್ಲ. ಈ ಕಾರಣಕ್ಕೆ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆಯಾಯಿತು ಎನ್ನುವ ಅಭಿಪ್ರಾಯ ವ್ಯಾಪಕವಾಗಿ ಕೇಳಿ ಬಂದಿತ್ತು.

ಈಗ ಬಿಜೆಪಿ ಹೈಕಮಾಂಡ್ ಮತ್ತೆ ಯಡಿಯೂರಪ್ಪ ಅವರಿಗೆ ಮಣೆ ಹಾಕಿದ್ದು, ಅವರ ಪುತ್ರ, ಯುವ ನಾಯಕ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.

ಅಧ್ಯಕ್ಷರಾದ ದಿನದಿಂದ ವಿಜಯೇಂದ್ರ ರಾಜ್ಯಾದ್ಯಂತ ಪ್ರವಾಸ ಮಾಡಿ, ಮಠ, ಮಂದಿರಗಳು, ಕಾರ್ಯಕರ್ತರು, ಮುಖಂಡರ ಭೇಟಿ ಮಾಡುತ್ತಿದ್ದಾರೆ. ಎಲ್ಲಾ ಕಡೆಗಳಲ್ಲಿ ಸಾವಿರಾರು ಕಾರ್ಯಕರ್ತರು ಜಮಾವಣೆಯಾಗುತ್ತಿದೆ.

ಇದೇ ವೇಳೆ ವಿರೋಧ ಪಕ್ಷದ ನಾಯಕರನ್ನಾಗಿ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದರಿಂದ ಪಕ್ಷದ ಚಟುವಟಿಕೆಗಳು ಮರಳಿ ಹಳಿಗೆ ಮರಳಲು ಪ್ರಾರಂಭಿಸಿವೆ.

ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭ:

ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕದ ನಂತರ ರಾಜ್ಯ ಪದಾಧಿಕಾರಿಗಳ ಆಯ್ಕೆ ಜೊತೆ ಜೊತೆಗೆ ಜಿಲ್ಲಾ ಘಟಕಗಳ ಪುನಾರಚನೆ ಬಿಜೆಪಿಯಲ್ಲಿ ನಡೆಯುವ ಒಂದು ಸಾಮಾನ್ಯ ಪ್ರಕ್ರಿಯೆ.

ಈಗಾಗಲೇ ಇರುವ ಅಧ್ಯಕ್ಷರು ಹಾಗೂ ಘಟಕಗಳ ಅವಧಿ ಮೂರು ವರ್ಷ ಮುಗಿದಿದ್ದು, ಹೊಸ ಜಿಲ್ಲಾ ಘಟಕಗಳು ರಚನೆಯಾಗಬೇಕಿದೆ.

ಈ ಹಿನ್ನೆಲೆಯಲ್ಲಿ ಹಲವು ಆಕಾಂಕ್ಷಿಗಳು ಕಸರತ್ತು ಪ್ರಾರಂಭಿಸಿದ್ದಾರೆ. ಬೇರೆ ಬೇರೆ ಹಿನ್ನೆಲೆ, ಆಯಾಮಗಳಲ್ಲಿ ತಮಗೆ ಅಧ್ಯಕ್ಷ ಸ್ಥಾನ ಸಿಗಬೇಕು ಎಂದು ಪಕ್ಷದ ವಲಯದಲ್ಲಿ ತಮ್ಮ ಹೆಸರನ್ನು ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ಮುರುಘಾ ಶರಣರಿಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

ಸದ್ಯ ಚಾಲ್ತಿಯಲ್ಲಿರುವ ಹೆಸರುಗಳ ಪೈಕಿ 6 ಜನ ಪ್ರಬಲ ಆಕಾಂಕ್ಷಿಗಳಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕೀಲರ ಪ್ರಕೋಷ್ಠದಲ್ಲಿದ್ದ ಮಲ್ಲಿಕಾರ್ಜುನ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಿ.ಟಿ.ಸುರೇಶ್ ಸಿದ್ದಾಪುರ, ಮೊಳಕಾಲ್ಮೂರು ಮಂಡಲ ಅಧ್ಯಕ್ಷ ಡಾ.ಮಂಜುನಾಥ್, ಹಾಲಿ ಉಪಾಧ್ಯಕ್ಷ ಸಂಪತ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್ ಹೆಸರುಗಳು ಮುಂಚೂಣಿಯಲ್ಲಿವೆ.

ಇದರಲ್ಲಿ ಪಕ್ಷ ಅಳೆದು ತೂಗಿ, ಯಾರಿಗೆ ಕೊಟ್ಟರೆ ಪ್ಲಸ್ ಆಗಲಿದೆ, ಪಕ್ಷ ಅಧಿಕಾರದಲ್ಲಿ ಇಲ್ಲದ ಸಂದರ್ಭದಲ್ಲಿ ಯಾರು ಸಮರ್ಥವಾಗಿ ಮುನ್ನಡೆಸಬಲ್ಲರು ಎಂಬಿತ್ಯಾದಿ ಲೆಕ್ಕಾಚಾರ ಹಾಕಿ ಅಧ್ಯಕ್ಷರ ಆಯ್ಕೆ ಮಾಡಲಿದೆ.

ಆಕಾಂಕ್ಷಿಗಳ ಬಲಾಬಲ ಏನೇನಿದೆ:

ಮಲ್ಲಿಕಾರ್ಜುನ್:
ಮಲ್ಲಿಕಾರ್ಜುನ್:

ಮಲ್ಲಿಕಾರ್ಜುನ್:

ಕೆ.ಎಸ್.ನವೀನ್ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದಾಗ ಮಲ್ಲಿಕಾರ್ಜುನ್ ಪ್ರಧಾನ ಕಾರ್ಯದರ್ಶಿಯಾಗಿ ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ್ದರು. ಆನಂತರದ ಅವಧಿಯಲ್ಲಿ ಬಿಜೆಪಿ ವಕೀಲರ ಪ್ರಕೋಷ್ಠದ ಜವಾಬ್ದಾರಿ ಹೊತ್ತು ಕೆಲಸ ಮಾಡಿದ್ದಾರೆ. ಜೊತೆಗೆ ವಿದ್ಯಾರ್ಥಿ ದೆಸಯಿಂದಲೂ ಎಬಿವಿವಿಯಲ್ಲಿ ಕೆಲಸ ಮಾಡಿದ ಹಿನ್ನೆಲೆಯಿದೆ.

ಜಿ.ಟಿ.ಸುರೇಶ್ ಸಿದ್ದಾಪುರ
ಜಿ.ಟಿ.ಸುರೇಶ್ ಸಿದ್ದಾಪುರ

ಜಿ.ಟಿ.ಸುರೇಶ್ ಸಿದ್ದಾಪುರ:

ಜಿ.ಟಿ.ಸುರೇಶ್ ಈ ಹಿಂದೆ ಚಿತ್ರದುರ್ಗ ಮಂಡಲದ ಅಧ್ಯಕ್ಷರಾಗಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದವರು. ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಸಂಘ ಪರಿವಾರದ ನಂಟನ್ನೂ ಹೊಂದಿದ್ದಾರೆ.

ಡಾ.ಮಂಜುನಾಥ್
ಡಾ.ಮಂಜುನಾಥ್

ಡಾ.ಮಂಜುನಾಥ್:

ಜಿಲ್ಲೆಯ ಗಡಿ ತಾಲೂಕು ಮೊಳಕಾಲ್ಮೂರು ಮಂಡಲದ ಅಧ್ಯಕ್ಷರಾಗಿ ಹಾಲಿ ಜವಾಬ್ದಾರಿಯಿದ್ದು, ಪಕ್ಷ ಸಂಘಟನೆಯಲ್ಲಿ ಒಳ್ಳೆಯ ಹೆಸರಿದೆ. ಜೊತೆಗೆ ಸಂಘ ಪರಿವಾರದ ಹಿನ್ನೆಲೆ ಹೊಂದಿದ್ದಾರೆ. ವೈದ್ಯರು, ಯುವಕರೂ ಆಗಿರುವುದರಿಂದ ಪಕ್ಷ ಸಂಘಟನೆಗೆ ಜಿಲ್ಲಾಧ್ಯಕ್ಷ ಸ್ಥಾನ ಬಯಸಿದ್ದಾರೆ.

ಇದನ್ನೂ ಓದಿ: ಎನ್‍ಇಪಿ ಜಾರಿಗೊಳಿಸದಿದ್ದರೆ ಜನಾಂದೋಲನ | ಕೆ.ಎಸ್.ನವೀನ್

ಜಯಪಾಲಯ್ಯ
ಜಯಪಾಲಯ್ಯ

ಜಯಪಾಲಯ್ಯ:

ಜಯಪಾಲಯ್ಯ ಹಾಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಈ ಹಿಂದೆಯೂ ಇದೇ ಜವಾಬ್ದಾರಿ ನಿಭಾಯಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದವರು. ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಒಮ್ಮೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಮುಖಂಡ ಶ್ರೀರಾಮುಲು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ವೆಂಕಟೇಶ್ ಯಾದವ್
ವೆಂಕಟೇಶ್ ಯಾದವ್

ವೆಂಕಟೇಶ್ ಯಾದವ್:

ಹಾಲಿ ರೈತ ಮೋರ್ಚಾದಲ್ಲಿ ಜಿಲ್ಲಾಧ್ಯಕ್ಷರಾಗಿರುವ ವೆಂಕಟೇಶ್ ಯಾದವ್ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಎನ್ನುವ ಮಾತು ಪಕ್ಷದ ವಲಯದಲ್ಲಿದೆ. ಈ ಹಿಂದೆ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಪರಿವಾರದ ಹಿನ್ನೆಲೆಯಿದ್ದು, ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಂಪತ್‍ಕುಮಾರ್
ಸಂಪತ್‍ಕುಮಾರ್

ಸಂಪತ್‍ಕುಮಾರ್:

ಸಂಪತ್‍ಕುಮಾರ್ ಪಕ್ಷದ ಹಿರಿಯ ಉಪಾಧ್ಯಕ್ಷ. ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಮುಖ ಜವಾಬ್ದಾರಿಗಳನ್ನು ಹೊತ್ತು ಸಮರ್ಥವಾಗಿ ನಿಭಾಯಿಸಿದ್ದಾರೆ. ಪಕ್ಷದ ಹಿರಿಯರ ವಲಯದಲ್ಲಿ ಪರಿಚಿತರಾಗಿದ್ದಾರೆ.

ಹೀಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇನ್ನೂ ಹಲವರು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಪಕ್ಷದ ಚಟುವಟಿಕೆಗಳಲ್ಲಿ ಈವರೆಗೆ ತೊಡಗಿಸಿಕೊಂಡು ಬಂದಿರುವ ಟ್ರ್ಯಾಕ್ ರೆಕಾರ್ಡ್ ಗಮನಿಸಲಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಜಿಲ್ಲೆಯ ಕೋರ್ ಕಮಿಟಿಯಲ್ಲಿ ಹೆಸರು ಅಂತಿಮಗೊಳ್ಳಬೇಕು. ಈ ಎಲ್ಲಾ ಪ್ರಕ್ರಿಯೆ ನಂತರ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಅನುಕೂಲವಾಗಿವ ವ್ಯಕ್ತಿಗೆ ಜಿಲ್ಲಾಧ್ಯಕ್ಷ ಸ್ಥಾನ ಎನ್ನಲಾಗುತ್ತಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaCompetitionDistrict PresidentKarnatakaR. Ashokvijayendraಆರ್.ಅಶೋಕ್ಕರ್ನಾಟಕಚಿತ್ರದುರ್ಗಜಿಲ್ಲಾಧ್ಯಕ್ಷಪೈಪೋಟಿಬಿಜೆಪಿವಿಜಯೇಂದ್ರ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ನ.23 ಮಾರುಕಟ್ಟೆಯಲ್ಲಿ ಸ್ಥಿರತೆ ಕಂಡುಕೊಂಡ ಅಡಕೆ ಬೆಲೆ
Next Article ಕತ್ತಾಳೆ, ಬಾಳೆ ಬಾಳೆ, ಅಡಿಕೆ, ಕತ್ತಾಳೆ ನಾರುಗಳ ಮೌಲ್ಯವರ್ಧನೆಗೆ ಕಾರ್ಯಾಗಾರ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up