
CHITRADURGA NEWS | 01 MARCH 2026
ಚಿತ್ರದುರ್ಗ: ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಕರೆ ನೀಡಿದರು.
ಇದನ್ನೂ ಓದಿ: ಮಾರ್ಚ್ 02 ರಂದು ವಿಶೇಷ ಚೇತನರಿಗೆ ತ್ರಿ-ಚಕ್ರ ವಾಹನಗಳ ವಿತರಣೆ

ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಜಾಗೃತ ರನ್ 2.0” 5 ಕಿ.ಮೀ ಮ್ಯಾರಥಾನ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
ಇಂದಿನ ವೇಗದ ಬದುಕಿನಲ್ಲಿ ದೈಹಿಕ ವ್ಯಾಯಾಮ, ಓಟ, ನಡಿಗೆ ಮತ್ತು ಯೋಗದಂತಹ ಚಟುವಟಿಕೆಗಳು ಅತ್ಯಗತ್ಯ. ಯುವಜನತೆ ಇವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸಬಲರಾಗಬೇಕು. ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಹೊಂದುವಂತೆ ಕಿವಿಮಾತು ಹೇಳಿದರು.
ಮ್ಯಾರಥಾನ್ ಕಾರ್ಯಕ್ರಮದ ಪುರುಷರ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಡಿ.ಬೋರಪ್ಪ ಕಾಲೇಜಿನ ವಿದ್ಯಾರ್ಥಿ ಸಚಿನ್ ಪಡೆದರು. ಡಾನ್ ಬಾಸ್ಕೋ ಶಾಲೆಯ ವಿದ್ಯಾರ್ಥಿ ಜೋಶ್ಯಾ ದ್ವಿತೀಯ ಸ್ಥಾನ ಹಾಗೂ ವಿದ್ಯಾವಿಕಾಸ ಶಾಲೆಯ ಸಮೃದ್ ತೃತೀಯ ಸ್ಥಾನ ಪಡೆದರು.
ಇದನ್ನೂ ಓದಿ: ಗ್ರಾಮಕ್ಕೊಂದು ಶಾಲೆ, ಪಂಚಾಯಿತಿ, ಸಹಕಾರ ಸಂಘವಿದ್ದರೆ ಅಭಿವೃದ್ಧಿ
ಅದೇ ರೀತಿಯಾಗಿ ಮಹಿಳಾ ವಿಭಾಗದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ.ಐಸಿರಿ ಪ್ರಥಮ ಸ್ಥಾನ, ಡಾನ್ ಬಾಸ್ಕೋ ಕಾಲೇಜಿನ ವಿದ್ಯಾರ್ಥಿನಿ ಎಸ್.ಪ್ರತೀಕ್ಷಾ ದ್ವಿತೀಯ ಸ್ಥಾನ ಹಾಗೂ ಡಾನ್ ಬಾಸ್ಕೋ ಶಾಲೆಯ ವಿದ್ಯಾರ್ಥಿನಿ ಶಿರಿಷಾ ತೃತೀಯ ಸ್ಥಾನ ಪಡೆದರು.
ವಿಜೇತರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಚಿತ್ರದುರ್ಗ ನಗರದ ಡಿಎಆರ್ ಮೈದಾನದಿಂದ ಪ್ರಾರಂಭವಾದ ಮ್ಯಾರಥಾನ್ ವಾಸವಿ ಲ್ಯಾಬ್ ಮುಂಭಾಗದಿಂದ ಬಿ.ಡಿ.ರಸ್ತೆಯ ಮೂಲಕ ಚಳ್ಳಕೆರೆ ಸರ್ಕಲ್, ಮದಕರಿ ಸರ್ಕಲ್, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಹೆಡ್ ಪೋಸ್ಟ್ ಆಫೀಸ್ ಹತ್ತಿರ ಗಾಂಧಿವೃತ್ತ, ಪ್ರವಾಸಿ ಮಂದಿರದ ಹತ್ತಿರ ಎಡಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಮೂಲಕ ಪುನಃ ಡಿಎಆರ್ ಮೈದಾನದಲ್ಲಿ ಅಂತ್ಯಗೊಂಡಿತು.
ಇದನ್ನೂ ಓದಿ: ಉತ್ತರಾಖಂಡ್ ಡಯಟ್ ತಂಡದಿಂದ ಕಾವಾಡಿಗರಹಟ್ಟಿ ಪಿ.ಎಂ.ಶ್ರೀ ಶಾಲೆಗೆ ಭೇಟಿ
ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಐಮಂಗಲ ಪೊಲೀಸ್ ತರಬೇತಿಯ ಶಾಲೆಯ ಪ್ರಾಂಶುಪಾಲರು ಸುಮಾರು 700ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
