By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
    ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
    4 hours ago
    ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
    4 hours ago
    ಸಾಮೂಹಿಕ ವಚನ ಗಾಯನ
    ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
    7 hours ago
    ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    ಅಂಗಾರಕ ಸಂಕಷ್ಟ | ಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ
    7 hours ago
    ಹ್ಯಾಂಡಲ್‌ ಬಿಟ್ಟು ಸ್ಟಂಟ್‌ ಮಾಡಿ ರೀಲ್ಸ್‌ ಮಾಡಿದವನ ವಿರುದ್ಧ ದೂರು ದಾಖಲು
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    8 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 day ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    7 hours ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    8 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    1 day ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    1 day ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    2 days ago
Reading: ಚಳ್ಳಕೆರೆ KSRTC ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಸ್ತು ಪ್ರದರ್ಶನ | ಶಾಸಕ ಟಿ.ರಘುಮೂರ್ತಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಳ್ಳಕೆರೆ KSRTC ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಸ್ತು ಪ್ರದರ್ಶನ | ಶಾಸಕ ಟಿ.ರಘುಮೂರ್ತಿ ಉದ್ಘಾಟನೆ

News Desk Chitradurga News
Last updated: 20 January 2026 20:26
News Desk Chitradurga News
8 months ago
Share
ಚಳ್ಳಕೆರೆ KSRTC ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಸ್ತು ಪ್ರದರ್ಶನ | ಶಾಸಕ ಟಿ.ರಘುಮೂರ್ತಿ ಉದ್ಘಾಟನೆ
ಚಳ್ಳಕೆರೆ KSRTC ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಸ್ತು ಪ್ರದರ್ಶನ | ಶಾಸಕ ಟಿ.ರಘುಮೂರ್ತಿ ಉದ್ಘಾಟನೆ
SHARE

CHITRADURGA NEWS | 20 JANUARY 2026

ಚಿತ್ರದುರ್ಗ: ಸಮಾನತೆಗೆ ಪೂರಕವಾಗಿ ಬಡ ಜನರಿಗಾಗಿ ನಮ್ಮ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರ ಪರ ನಿಲ್ಲುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಎಂದು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ದಕ್ಷಿಣ ಕರ್ನಾಟದಲ್ಲೇ ಚಿತ್ರದುರ್ಗದ ತಲಾದಾಯ ಕಡಿಮೆ | ರಾಜ್ಯದ ಸರಸಾರಿ ತಲಾದಾಯ ಎಷ್ಟು ? | ಚಿತ್ರದುರ್ಗದ ತಲಾದಾಯವೆಷ್ಟು..?

ಚಳ್ಳಕೆರೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಜಾಗೃತಿ ಮೂಡಿಸುವ ವಿಶೇಷ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತ ಸೌಕರ್ಯಗಳು, ಅಭಿವೃದ್ಧಿಯ ಜತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದು ಬಹಳ ಸಂತೋಷದಾಯಕವಾದುದು. ರಾಜ್ಯ ಸರ್ಕಾರ ಈಗಾಗಲೇ ಎರಡೂವರೆ ವರ್ಷ ಪೂರೈಸಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಿದ್ದ ಆಶ್ವಾಸನೆಯಂತೆ, ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಬಡವರ, ದೀನದಲಿತರ, ರೈತರ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಜಾರಿಗೊಳಿಸಿದ ಯೋಜನೆಗಳು ಜನಪ್ರಿಯವಾಗಿವೆ. ಈ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಿದ್ದು, ಆರ್ಥಿಕವಾಗಿ ಸಬಲರನ್ನಾಗಿ ಮಾಡಿವೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 20 ಜನವರಿ | ಇಂದಿನ ಅಡಿಕೆ ಮಾರುಕಟ್ಟೆ ವಿವರ

ಗ್ಯಾರಂಟಿ ಯೋಜನೆಗಳು ಒಂದು ಜಾತಿ, ಧರ್ಮ ಅಥವಾ ಪಕ್ಷಕ್ಕೆ ಸೀಮಿತವಾಗಿಲ್ಲ. ಅರ್ಹತೆ ಇರುವ ಎಲ್ಲ ಫಲಾನುಭವಿಗಳಿಗೂ ಸಹ ಗ್ಯಾರಂಟಿ ಯೋಜನೆಗಳು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ತಲುಪುತ್ತಿವೆ. ಆದರೆ ವಿಪಕ್ಷದವರು ರಾಜಕಾರಣ ಮಾಡಿ, ಸುಳ್ಳುಗಳನ್ನು ಹೇಳುವ ಮೂಲಕ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ನಮ್ಮ ಸರ್ಕಾರ ಬಡಜನರಿಗಾಗಿ, ಮಹಿಳೆಯರಿಗಾಗಿ, ಕಾರ್ಮಿಕರಿಗಾಗಿ, ವಿದ್ಯಾರ್ಥಿಗಳಿಗಾಗಿ ಯೋಜನೆಗಳನ್ನು ರೂಪಿಸಿ, ಸೌಲಭ್ಯಗಳನ್ನು ತಲುಪಿಸುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ರಾಜ್ಯಮಟ್ಟದಿಂದ ತಾಲ್ಲೂಕು ಮಟ್ಟದವರೆಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರ ರಚಿಸಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳನ್ನು ನೇಮಕ ಮಾಡಿದ್ದು, ಇವರು ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. 

ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಶಾಸಕನಾಗಿ ಈ ಯೋಜನೆಗಳನ್ನು ಜನರಿಗೆ ತಲುಪಿಸಿರುವುದಕ್ಕೆ ಸಂತೋಷವಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಮಾಹಿತಿ ಅರಿಯಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 20 | ಹತ್ತಿ ರೇಟ್ ಎಷ್ಟಿದೆ?

ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಶಿವಣ್ಣ ಗಂಜಿಗಟ್ಟೆ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಇವು ಬಡವರ ಪಾಲಿಗೆ ವರದಾನವಾಗಿ, ಅವರ ಆರ್ಥಿಕಾಭಿವೃದ್ಧಿಗೆ ಕೈಗನ್ನಡಿಯಾಗಿವೆ ಎಂದು ಬಣ್ಣಿಸಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಜಾರಿ ಮಾಡಿರುವ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಈ ವಿಶೇಷ ವಸ್ತು ಪ್ರದರ್ಶನದಲ್ಲಿ ಪ್ರಗತಿ ಮಾಹಿತಿಯನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ವಸ್ತು ಪ್ರದರ್ಶನವು ಮೂರು ದಿನಗಳ ಕಾಲ ಏರ್ಪಡಿಸಿದ್ದು, ಇದೇ ಜ.22 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದ್ದು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭೇಟಿ ನೀಡಿ, ವೀಕ್ಷಿಸಬಹುದಾಗಿದೆ. ಎಂದು ಹೇಳಿದರು.

ವಸ್ತು ಪ್ರದರ್ಶನದ ಮಾಹಿತಿ:

ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ರೂಪಿಸಿರುವ ಕಾರ್ಯಕ್ರಮಗಳಾದ ಬುಡಕಟ್ಟು ಕಲೆ ಮತ್ತು ಸಂಸ್ಕøತಿ, ಪರಿಶಿಷ್ಟ ಪಂಗಡ ಪೌಷ್ಟಿಕ ಆಹಾರ ಯೋಜನೆ, ಲಿಡ್ಕರ್ ಅನುಷ್ಠಾನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿವಾಹಗಳಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಆಯವ್ಯಯ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕ್ರೈಸ್ ವಸತಿ ಶಾಲೆಗಳಿಗೆ ಪ್ರವೇಶ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಶೈಕ್ಷಣಿಕ ಉತ್ತೇಜನ ಕಾರ್ಯಕ್ರಮ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಪ್ರತಿಭಾವಂತರಿಗೆ ಪ್ರೋತ್ಸಾಹಧನ, ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿದ್ಯಾರ್ಥಿ ವೇತನ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ನಿಗಮ-ಮಂಡಳಿಗಳು, 2011 ರ ಜನಗಣತಿಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆ ಶೇಕಡವಾರು ಮಾಹಿತಿ ಫಲಕ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ.

ಜನರ ಗಮನಸೆಳೆದ ಛಾಯಾಚಿತ್ರಗಳು: 

ಚಳ್ಳಕೆರೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯ ಎದುರು ಹಾಗೂ ವಿವಿಧ ಛಾಯಾಚಿತ್ರಗಳು ಮುಂದೆ ನಿಂತು ಜನಪ್ರತಿನಿಧಗಳಿಂದ ಮೊದಲುಗೊಂಡು, ಸಾರ್ವಜನಿಕರು ಕೂಡ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಇದನ್ನೂ ಓದಿ: ನಾಲ್ವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ | ಚಿತ್ರದುರ್ಗಕ್ಕೆ ಹೊಸ AC

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಆರ್.ಶಿವಣ್ಣ ಗಂಜಿಗಟ್ಟೆ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಸದಸ್ಯರಾದ ಗುಜ್ಜಾರಪ್ಪ, ಕವಿತಾ ದಳವಾಯಿ, ಕೆಡಿಪಿ ಸದಸ್ಯ ಸುರೇಶ್, ಮುಖಂಡರಾದ ಪುರುಷೋತ್ತಮ, ಚೌಳೂರು ಪ್ರಕಾಶ್, ಮಲ್ಲಿಕಾರ್ಜುನ್, ಅಂಜಿನಪ್ಪ, ಆಂಜನೇಯ, ಜನಾರ್ಧನ್, ಆರ್.ತಿಪ್ಪೇರುದ್ರಪ್ಪ, ಹನುಮಂತರೆಡ್ಡಿ, ತಿಪ್ಪೇಸ್ವಾಮಿ, ವೀರಭದ್ರಪ್ಪ, ಶಶಿಧರ್, ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ಡಿಟಿಒ ಕೆ.ಬಸವರಾಜ್ ಸೇರಿದಂತೆ ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChallakereChitradurgaChitradurga newsExhibitionGuarantee schemeಗ್ಯಾರಂಟಿ ಯೋಜನೆಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ವಸ್ತು ಪ್ರದರ್ಶನ
Share This Article
Facebook Email Print
Previous Article ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಠಿ ಯೋಜನೆ-2031 ಕುರಿತ ಕಾರ್ಯಾಗಾರ ದಕ್ಷಿಣ ಕರ್ನಾಟದಲ್ಲೇ ಚಿತ್ರದುರ್ಗದ ತಲಾದಾಯ ಕಡಿಮೆ | ರಾಜ್ಯದ ಸರಸಾರಿ ತಲಾದಾಯ ಎಷ್ಟು ? | ಚಿತ್ರದುರ್ಗದ ತಲಾದಾಯವೆಷ್ಟು..?
Next Article BJP ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ | ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ BJP ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ | ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ
Leave a Comment

Leave a Reply Cancel reply

Your email address will not be published. Required fields are marked *

ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
ಮುಖ್ಯ ಸುದ್ದಿ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
ಮುಖ್ಯ ಸುದ್ದಿ
Korean glass skin
ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
Life Style
ಸಾಮೂಹಿಕ ವಚನ ಗಾಯನ
ಶರಣಸಂಸ್ಕೃತಿ ಉತ್ಸವ | 10 ಸಾವಿರ ಜನರಿಂದ ವಚನ ಗಾಯನಕ್ಕೆ ಸಿದ್ಧತೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up