
CHITRADURGA NEWS | 16 SEPTEMBER 2-24
ಚಿತ್ರದುರ್ಗ: ನಗರಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪದಡಿ ನಾಲ್ವರು ನಗರಸಭೆ ಸದಸ್ಯರನ್ನು ಬಿಜೆಪಿ (BJP) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
33ನೇ ವಾರ್ಡ್ ಸದಸ್ಯೆ ಹಾಗೂ ಹಾಲಿ ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, 1ನೇ ವಾರ್ಡ್ ಸದಸ್ಯೆ ನಾಗಮ್ಮ, 17ನೇ ವಾರ್ಡ್ ಸದಸ್ಯ ಜಯ್ಯಪ್ಪ ಹಾಗೂ 30ನೇ ವಾರ್ಡ್ ಸದಸ್ಯ ಮಂಜಣ್ಣ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ: ನಗರಸಭೆಯಲ್ಲಿ ಶಾಸಕ ವೀರೇಂದ್ರ(ಪಪ್ಪಿ) ಮೇಲುಗೈ | ಬಹುಮತವಿದ್ದೂ ಸೋತ ಬಿಜೆಪಿ
ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧವಾಗಿ ಮತ ಚಲಾಯಿಸಿದ್ದು, ಪಕ್ಷ ವಿಪ್ ನೀಡಿದ್ದರೂ ಕಡೆಗಣಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿರುವುದರಿಂದ ಪಕ್ಷದ ಶಿಸ್ತು ಉಲ್ಲಂಘನೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

