CHITRADURGA NEWS | 04 AUGUST 2026
ಚಿತ್ರದುರ್ಗ: ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡ ಜನರು, ವಿದ್ಯಾರ್ಥಿಗಳು ಹಾಗೂ ವಿಕಲಚೇತನರಿಗಾಗಿ ಜಾರಿಗೆ ತರಲಾದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ
2026–27ನೇ ಸಾಲಿನ ಕ್ರಿಯಾ ಯೋಜನೆಯಡಿ “ನಗರಸಭೆ ನಿಧಿ” ಮತ್ತು “ಎಸ್.ಎಫ್.ಸಿ. ನಿಧಿ”ಯ ಶೇ.24.10 ಹಾಗೂ ಶೇ.7.25 ಅಡಿಯಲ್ಲಿ ಎಸ್.ಸಿ, ಎಸ್.ಟಿ ಮತ್ತು ಇತರ ಬಡ ಜನರ ಕಲ್ಯಾಣಕ್ಕಾಗಿ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಲದೆ ಎಸ್‍ಎಸ್‍ಎಲ್‍ಸಿಯಿಂದ ಸ್ನಾತಕೋತ್ತರ ಪದವಿವರೆಗೂ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಹಾಗೂ ಶೇ.5ರ ಯೋಜನೆಯಡಿ ವಿಕಲಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನ ಖರೀದಿಸಿ ನೀಡುವ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಮಂಜೂರಾತಿ ದೊರೆತಿದೆ.
ಈ ಯೋಜನೆಗಳಿಗೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 31 ಎಂದು ನಿಗದಿಪಡಿಸಲಾಗಿತ್ತು. ಆದರೆ ನಿರೀಕ್ಷಿತ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಗೊಳ್ಳದ ಕಾರಣ, ಸಾರ್ವಜನಿಕರ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಆಗಸ್ಟ್ ನಲ್ಲಿ ಎರಡು ತಿಂಗಳ ಪಡಿತರ ಅಕ್ಕಿ ವಿತರಣೆ | ಬಯೋಮೆಟ್ರಿಕ್ ಕಡ್ಡಾಯ
ಹೆಚ್ಚಿನ ಮಾಹಿತಿಗಾಗಿ ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಸೂಚನಾ ಫಲಕ, ಕಛೇರಿ ವೇಳೆಯಲ್ಲಿ ವಿಷಯ ನಿರ್ವಾಹಕರು ಅಥವಾ ನಗರಸಭೆಯ ವೆಬ್‍ಸೈಟ್ www.chitradurgacity.mrc.gov.in ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

