ಮುಖ್ಯ ಸುದ್ದಿ
ಫಹಲ್ಗಾಮ್ ನರಮೇಧ | ವಿಎಚ್ ಪಿ, ಬಜರಂಗದಳ ಪ್ರತಿಭಟನೆ | ಪಾಕ್ ವಿರುದ್ಧ ಆಕ್ರೋಶ
CHITRADURGA NEWS | 26 APRIL 2025
ಚಿತ್ರದುರ್ಗ: ಫಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ನರಮೇಧ ಖಂಡಿಸಿ ವಿಶ್ವ ಹಿಂದೂ ಪರಿಷತ್ – ಜರಂಗದಳ ವತಿಯಿಂದ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
Also Read: BSC Agriculture ಪದವಿ ಸೇರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ
ನಗರದ ಆನೆ ಬಾಗಿಲಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಗಾಂಧಿ ವೃತ್ತ ತಲುಪಿತು. ಅಲ್ಲಿ ಉಗ್ರರ ಪ್ರತಿಕೃತಿ ಹಾಗೂ ಪಾಕಿಸ್ತಾನದ ಧ್ವಜಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಉಗ್ರರು ಹಾಗೂ ಉಗ್ರರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಪಂಜಿನ ಸಮೇತ ಒನಕೆ ಓಬವ್ವ ವೃತ್ತ ತಲುಪಿದ ಪ್ರತಿಭಟನಾ ಮೆರವಣಿಗೆಯಲ್ಲಿ ಮೌನಾಚರನೆ ಮಾಡುವ ಮೂಲಕ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಬಜರಂಗದಳ ರಾಜ್ಯ ಸಂಚಾಲಕ ಪ್ರಭಂಜನ್ ಮಾತನಾಡಿ, ದೇಶದ ನಾನಾ ಭಾಗಗಳಿಂದ ಜನರು ಕಾಶ್ಮೀರ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಇದರಿಂದ ಅಲ್ಲಿನ ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರವಾಗುತ್ತಿದೆ. ಆ ಹಣವನ್ನು ಭಯೋತ್ಪಾದನೆಗೆ ಬಳಸಲಾಗುತ್ತಿದೆ. ಈ ಕುರಿತು ಹಿಂದೂ ಬಾಂಧವರು ಎಚ್ಚರ ವಹಿಸಬೇಕು. ವ್ಯಾಪಾರ ಮಾಡುವಾಗಲೂ ವಿವೇಚನೆಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಪಹಲ್ಗಾಮ್‌ನಲ್ಲಿ ಏಕಾಏಕಿ ಎಂಟು ಜನ ಉಗ್ರರು ಪ್ರವಾಸಿಗರ ಮೇಲೆ ದಾಳಿ ಮಾಡಿದರು. ದಾಳಿ ಮಾಡುವ ಮೊದಲು ಧರ್ಮ ಕೇಳಿ ಹಿಂದೂಗಳನ್ನು ಹುಡುಕಿ ಹೊಡೆದಿದ್ದಾರೆ ನಪಂಸಕ ಉಗ್ರರು. ಈಗ ಪ್ರತಿಯೊಬ್ಬರಿಗೂ ಕಾಶ್ಮೀರಕ್ಕೆ ಹೋಗುವ ಅವಕಾಶವಿದೆ. ಎಲ್ಲರೂ ಅಲ್ಲಿಗೆ ಹೋಗಿ ನಾವು ಅದೇ ರೀತಿ ಹುಡುಕಿ ಹೊಡೆಯಬೇಕು. ಅಲ್ಲಿನ ನಮ್ಮವರನ್ನು ಹುಡುಕಿ ನಾವು ಅವರೊಂದಿಗೆ ವ್ಯಾಪಾರ ಮಾಡಬೇಕು. ಇದರಿಂದ ಹಣ ದುರುಪಯೋಗ ಆಗುವುದಿಲ್ಲ ಎಂದರು.
ದಾಳಿಯ ವೇಳೆ ಧರ್ಮವನ್ನು ಕೇಳಿ ಗುಂಡಿಕ್ಕಿ ಕೊಲ್ಲಲಾಗಿದೆ. ಅಲ್ಲಿಗೆ ಹೋಗಿದ್ದ ಪ್ರವಾಸಿರ ಹಣೆಗೆ ಗನ್ ಇಟ್ಟು ಧರ್ಮ ಕೇಳಿದಾಗ ಅವರು ಧೈರ್ಯದಿಂದ ಹಿಂದೂ ಎಂದು ಹೇಳಿದ್ದಾರೆ. ಪ್ರಾಣ ಬಿಟ್ಟರೂ ಧರ್ಮ ಬಿಡಲಿಲ್ಲ. ಆದರೆ ನಾವು ಮುಸ್ಲೀಮರೊಟ್ಟಿಗೆ ವ್ಯಾಪಾರ ಮಾಡುತ್ತಿದ್ದೇವೆ. ಚಿತ್ರದುರ್ಗಕ್ಕೂ ಭಯೋತ್ಪಾಧನೆ ಬಂದಿದೆ. ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಈ ಕುರಿತು ಎಲ್ಲರೂ ಗಂಭೀರ ಚಿಂತನೆ ಮಾಡಬೇಕು ಎಂದು ಎಚ್ಚರಿಸಿದರು.
ಮಾಜಿ ಸೈನಿಕ ಭಗತ್‌ಸಿಂಗ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದಾರೆ. ಹಾಗಾಗಿ ಅವರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದಾರೆ. ಇದಕ್ಕೆ ಅಲ್ಲಿನ ಸ್ಥಳೀಯ ವ್ಯಾಪಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ. ಹಾಗಾಗಿ ಪ್ರವಾಸಿಗರು ಕಾಶ್ಮೀರಕ್ಕೆ ಬಂದು ಖರ್ಚು ಮಾಡುವ ಹಣವನ್ನು ವ್ಯಾಪಾರಿಗಳು ಭಯೋತ್ಪಾದನೆಗೆ ಬಳಸುತ್ತಿದ್ದಾರೆ. ಹಾಗಾಗಿ ಪ್ರವಾಸಿಗರು ಅಲ್ಲಿಗೆ ಬರುವುದನ್ನು ಕಡಿಮೆ ಮಾಡಿ ಎಂದು ಸಲಹೆ ಮಾಡಿದರು.
Also Read: ಪಕ್ಕದ ಮನೆ ಗೆಳತಿ ಸೈಕಲ್ ಕೊಟ್ಟಿಲ್ಲವೆಂದು ಬಾಲಕಿ ಆತ್ಮಹತ್ಯೆ
ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ, ದಾಳಿಯ ಹೋಣೆಯನ್ನು ಭಯೋತ್ಪಾದಕ ಸಂಘಟನೆಗಳು ಒಪ್ಪಿಕೊಂಡಿವೆ. ಉಗ್ರರಿಗೆ ಆಶ್ರಯ ನೀಡಿದ ಬಗ್ಗೆ ಪಾಕಿಸ್ತಾನ ಒಪ್ಪಿಕೊಂಡಿದೆ. ಜಗತ್ತಿನ ಮುಸ್ಲಿಂ ರಾಷ್ಟ್ರಗಳು ಸಹ ಉಗ್ರ ದಾಳಿಯನ್ನು ಖಂಡಿಸಿವೆ. ಆದರೆ ಕಾಂಗ್ರೇಸ್ ಇಲ್ಲಿಯೂ ತುಷ್ಟೀಕರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಗ್ರರ ಮೇಲೆ ಪ್ರತೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎಂದು ಮುಸ್ಮೀಮರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷ ಶರಣ್‌ಕುಮಾರ್ ಮಾತನಾಡಿ, ಜಮ್ಮು-ಕಾಶ್ಮೀರಕ್ಕೆ ಪ್ರವಾಸ ಹೋದವರ ಮೇಲೆ ಉಗ್ರರು ದಾಳಿ ನಡೆಸಿರುವುದು ಖಂಸನೀಯ. ಇದೊಂದು ಮಾನವೀಯತೆಯ ಮೇಲೆ ನಡೆದ ದಾಳಿ. ಹಾಗಾಗಿ ಪ್ರತಿಯೊಬ್ಬ ಭಾರತೀಯನೂ ಇದನ್ನು ಖಂಡಿಸಬೇಕು.
Also Read: ಪುರಸಭೆ ಮುಖ್ಯಾಧಿಕಾರಿ ಸಾವು | ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು | ಜಿಲ್ಲಾಸ್ಪತ್ರೆಯಲ್ಲಿ ಮೃತ
ಇದಕ್ಕೆ ಪ್ರತೀಕಾರವಾಗಿ ಉಗ್ರರನ್ನು ಹುಡುಕಿ ಕೊಲ್ಲಬೇಕು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರು ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳಬೇಕು. ಆ ಮೂಲಕ ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೊಗೆಯಬೇಕು ಎಂದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಹಿಂದೂಪರ ಸಂಘಟನೆಗಳ ಮುಖಂಡರಾದ ಷಡಾಕ್ಷರಪ್ಪ, ಜಿ.ಎಂ.ಸುರೇಶ್, ಮಲ್ಲಿಕಾರ್ಜುನ್, ಸಂಪತ್‌ಕುಮಾರ್, ಶ್ಯಾಮಲಾ ಶಿವಪ್ರಕಾಶ್, ರೇಖಾ, ಬಸಮ್ಮ, ನ್ಯಾಯವಾದಿ ವಿಶ್ವನಾಥಯ್ಯ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದರು.