
CHITRADURGA NEWS | 11 NOVEMBER 2025
ಚಿತ್ರದುರ್ಗ: ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಪಾಲಿಟೆಕ್ನಿಕ್ ವತಿಯಿಂದ, ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ 2025-26ರ ಫಾಲಿಪೆಸ್ಟ್ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಕ್ರಿಕೆಟ್ ಬ್ಯಾಟ್ ಹಿಡಿದು ಬ್ಯಾಟಿಂಗ್ ಮತ್ತು ಬೋಲಿಂಗ್ ಮಾಡಿ ಚಾಲನೆ ನೀಡಿದರು.
ನಂತರ ಮಾತನಾಡಿದ ಶ್ರೀಗಳು, ಯಾವುದೇ ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತಿಮುಖ್ಯ. ಬದ್ದತೆ, ಶಿಸ್ತು, ಸಂಯಮ, ತಾಳ್ಮೆಯ ಜತೆಗೆ ಒತ್ತಡ ನಿವಾರಣೆ ಜೀವನದಲ್ಲಿ ಕೌಶಲ್ಯಗಳನ್ನು ವೃದ್ಧಿಸುವಂತೆ, ವ್ಯಕ್ತಿತ್ವ ಬಲವರ್ಧನೆ ಆರೋಗ್ಯ, ಆತ್ಮವಿಶ್ವಾಸಕ್ಕೆ ಪ್ರೇರಣೆ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇದನ್ನೂ ಓದಿ: ಮಕ್ಕಳ ಜೊತೆ ಹಾಸ್ಟೆಲ್ ಊಟ ಮಾಡಿದ ಜಿಪಂ ಸಿಇಒ ಡಾ.ಆಕಾಶ್
ಶಿಕ್ಷಣಕ್ಕೆ ದೈಹಿಕ ಆರೋಗ್ಯ ಮುಖ್ಯ. ಅದರಂತೆ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ವಾತವರಣವೂ ಅಷ್ಟೇ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯರಾದ ಎಸ್.ವಿ.ರವಿಶಂಕರ್, ವಿಭಾಗದ ಮುಖ್ಯಸ್ಥರಾದ ವಿ.ಟಿ ರವಿ, ಪಿ.ಬಿ ರಾಜೇಶ್, ಎಸ್. ಮೋಹನ್ ಕುಮಾರ್, ಶ್ರೀಮತಿ ನಳಿನಾಕ್ಷಿ, ಪಿ.ಎ.ರಘು ಸೇರಿದಂತೆ ಪಾಲಿಟೆಕ್ನಿಕ್ನ ಐದು ವಿಭಾಗಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
