
CHITRADURGA NEWS | 30 MAY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಭೂದಾಖಲೆಗಳ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿರುವ ಬಿ.ರಾಮಾಂಜನೇಯ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಜೂನ್ 01ರಂದು ಸಂಜೆ 5.30ಕ್ಕೆ ಚಿತ್ರದುರ್ಗ ನಗರದ ಎನ್.ಹೆಚ್-48ರ ಸರ್ವೀಸ್ ರಸ್ತೆಯಲ್ಲಿರುವ ಕೆಇಬಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್
ಮುಖ್ಯ ಅತಿಥಿಗಳಾಗಿ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತ ವೆಂಕಟರಾಜ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂ ದಾಖಲೆಗಳ ಹೆಚ್ಚುವರಿ ನಿರ್ದೇಶಕ ಕೆ.ಜಯಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಬೆಂಗಳೂರು ವಿಭಾಗ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕ ಎಸ್.ನಿಸಾರ್ ಅಹ್ಮದ್ ಭಾಗವಹಿಸುವರು.
ಚಿತ್ರದುರ್ಗ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಏಕನಾಥ್ ವಿ.ಆರ್.ಎಮ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

