
CHITRADURGA NEWS | 01 JULY 2025
ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಡಾ.ಅನಂತರಾಮು ಹಾಗೂ ಎಂ.ಎಂ. ಪ್ರೌಢಶಾಲೆ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಪಾಪಣ್ಣ ಇವರುಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
Also Read: ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಬೀಳ್ಕೊಡುಗೆ ಸಮಾರಂಭದಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಭಾಗವಹಿಸಿ ಮಾತನಾಡಿ, ಸಂಸ್ಥೆ ನಿಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ನಗು ನಗುತ ಜೀವಿಸಿ ಮತ್ತೊಬ್ಬರ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆಯೆಂದರೆ ಅದಕ್ಕೆ ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯ ಕಾರಣ. ದೇಹಕ್ಕೆ ವಯಸ್ಸಾಗಬಹುದು. ಆದರೆ ಮನಸ್ಸಿಗೆ ಎಂದಿಗೂ ವಯಸ್ಸಾಗುವುದಿಲ್ಲ. ವೃತ್ತಿಯಲ್ಲಿರುವವರು ನಿವೃತ್ತಿಯಾಗಲೇಬೇಕು.
ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಮನಸ್ಸಿನಿಂದ ಅಳೆಯಬೇಕು. ರೂಪ, ಧರಿಸಿರುವ ಬಟ್ಟೆಯಿಂದಲ್ಲ. ಮತ್ತೊಬ್ಬರ ಬಗ್ಗೆ ಎಂದಿಗೂ ಹಗುರುವಾಗಿ ಮಾತನಾಡಬೇಡಿ. ಕೆಟ್ಟ ಆಲೋಚನೆಯಿಂದ ದೂರವಿದ್ದು, ಸಧೃಢ ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
ಈ ವೇಳೆ ದಾವಣಗೆರೆ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಹೆಚ್.ವಿ.ವಾಮದೇವಪ್ಪ ಮಾತನಾಡಿದರು.
Also Read: ಸಚಿವ ಸ್ಥಾನದಿಂದ ಜಮೀರ್ ಅಹಮದ್ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಈ ಸಂದರ್ಭದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಣ ನಿಕಾಯ ಮುಖ್ಯಸ್ಥ ಡಾ.ಕೆ.ವೆಂಕಟೇಶ್, ಕೆ.ರುದ್ರಮುನಿ, ಗೋವಿಂದರಾಜು, ನಾಗಭೂಷಣ್‍ಶೆಟ್ಟಿ, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಎಲ್ಲಾ ಪ್ರಾಂಶುಪಾಲರುಗಳು, ಬೋಧಕ-ಬೋಧಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
