
CHITRADURGA NEWS | 03 MAY 2026
ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಅವರು ನವೀಕೃತ ನ್ಯಾಯಾಂಗ ವೇದಿಕೆಯ ಉದ್ಘಾಟನೆ ನೆರವೇರಿಸಿದರು.
ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವ ಜಿಲ್ಲೆಯ 58 ಪ್ರಕರಣಗಳ ಇತ್ಯರ್ಥಕ್ಕೆ ಪ್ರಯತ್ನ
ಇದೇ ವೇಳೆ ವರ್ಗಾವಣೆಗೊಂಡಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ, ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ನ್ಯಾಯಾಧೀಶರಾದ ಎ.ಎಂ. ಚೈತ್ರ ಹಾಗೂ ಉಜ್ಜಲ್ ವೀರಣ್ಣ ಸಿದ್ದಣ್ಣನವರ್ ಸೇರಿದಂತೆ ನಾಲ್ವರು ನ್ಯಾಯಾಧೀಶರನ್ನು ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್. ಓ. ಜಗದೀಶ ಗುಂಡೇರಿ ಸೇರಿದಂತೆ ಜಿಲ್ಲಾ ನ್ಯಾಯಾಲಯದ ಇತರೆ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
