CHITRADURGA NEWS | 19 NOVEMBER 2026
ಚಿತ್ರದುರ್ಗ: ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ರೈತರ ಶಕ್ತಿಯನ್ನು ಕುಂದಿಸುತ್ತಿದೆ. ರೈತರ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂಬರುವ ಹಿರಿಯೂರು ಉಪಚುನಾವಣೆಯಲ್ಲಿ ರೈತ ಸಂಘದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ರೈತ ಸಂಘದ ಸಲಹಾ ಸಮಿತಿ ಸದಸ್ಯ ರೆಡ್ಡಿಹಳ್ಳಿ ವೀರಣ್ಣ ತಿಳಿಸಿದರು.
ಇದನ್ನೂ ಓದಿ: ಲೋಕಾಯುಕ್ತ ದಾಳಿ ಯಾರ ಬಳಿ ಎಷ್ಟೆಷ್ಟು ಆಸ್ತಿ | ಶಾಲೆ,ಆಸ್ಪತ್ರೆ ಸೈಟು, ಮನೆ…
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ತೆರಳಿ ರೈತ ಸಂಘಟನೆಯನ್ನು ಬಲಪಡಿಸಲಾಗುವುದು. ಜಿಲ್ಲೆಯ ನಾಲ್ಕು ರೈತ ಸಂಘಟನೆಗಳು ಒಗ್ಗೂಡಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ಮುಂದಿನ ದಿನಗಳಲ್ಲಿ ನಡೆಯುವ ಎಲ್ಲ ಚುನಾವಣೆಗಳಲ್ಲೂ ರೈತ ಸಂಘದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದರು.
ರಾಜ್ಯವು ಜಲ ಮತ್ತು ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿದ್ದರೂ ನೀರಿನ ಸಮರ್ಪಕ ಹಂಚಿಕೆಯಾಗುತ್ತಿಲ್ಲ. ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಸರ್ಕಾರಗಳು ರೈತರ ಸಮಸ್ಯೆಗಳನ್ನು ಕಡೆಗಣಿಸುತ್ತಿರುವುದರಿಂದ ಕೃಷಿ ಸಂಕಷ್ಟ ಹೆಚ್ಚಾಗಿದ್ದು, ಅನೇಕ ರೈತರು ಕೃಷಿ ತೊರೆದು ಬೇರೆ ಉದ್ಯೋಗಗಳತ್ತ ಮುಖ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿ, ತುಂಗಾ ನದಿಯಿಂದ 17.4 ಟಿಎಂಸಿ ನೀರನ್ನು ಭದ್ರಾ ಜಲಾಶಯಕ್ಕೆ ಪಂಪ್ ಮಾಡಿದ್ದರೆ ಜಿಲ್ಲೆಯ ನೀರಿನ ಸಮಸ್ಯೆ ಇಷ್ಟೊಂದು ಉಲ್ಬಣಿಸುತ್ತಿರಲಿಲ್ಲ. ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ರೂ. ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್
ಅನುದಾನ ಬಿಡುಗಡೆಗೆ ಆಗ್ರಹಿಸಿ ನ.23ರಂದು ಸಂಸದರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನ.21ರಂದು ಮುಖ್ಯಮಂತ್ರಿ ಹಿರಿಯೂರಿಗೆ ಆಗಮಿಸುವ ಮುನ್ನ ರೈತರ ಖಾತೆಗಳಿಗೆ ಬೆಳೆ ವಿಮೆ ಹಣ ಜಮೆ ಮಾಡಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಕಬ್ಬಿಗೇರೆ ನಾಗರಾಜು, ನಿಜಲಿಂಗಪ್ಪ, ಮಲ್ಲಿಕಾರ್ಜುನ್ ಡಿ.ಎಸ್.ಹಳ್ಳಿ, ಮಲ್ಲಿಕಾರ್ಜುನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

