CHITRADURGA NEWS | 02 APRIL 2026
ಚಿತ್ರದುರ್ಗ: ಕಿಸಾನ್ ಕಾಂಗ್ರೆಸ್ ಹಾಗೂ ರೈತ ಮುಖಂಡ, ನಗರದ ರೇಣುಕಾ ಆಗ್ರೋ ಫರ್ಟಿಲೈಜರ್ಸ್ ಮಾಲಿಕ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದಾರೆ.
ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕ, ಪಾಕಶಾಲೆ ಹೋಟೆಲ್ ಸಮೀಪದಲ್ಲಿ ಶಿವಲಿಂಗಪ್ಪ(52) ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಮಾರ್ಚ್ 31 ರಂದು ಮೃತರ ಪತ್ನಿ ರಂಜಿತಾ, ಶಿವಲಿಂಗಪ್ಪ ಅವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಆದರೆ, ಈಗ ಶವವಾಗಿ ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸ್ ಸಿಬ್ಬಂದಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

