
CHITRADURGA NEWS | 04 DECEMBER 2025
ಚಿತ್ರದುರ್ಗ: ಜಿಲ್ಲೆಯ ರೈತರು ಒಮ್ಮೆ ಮಳೆಯೇ ಇಲ್ಲದ ತೀವ್ರ ಬಂದ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದರೆ, ಮತ್ತೊಮ್ಮೆ ಮಳೆ ಅತಿಯಾಗಿ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ, ಪರಿಹಾರ ನೀಡಲು ಸರ್ಕಾರ ಮೀನಾ ಮೇಷ ಎಣಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು.
ಇದನ್ನೂ ಓದಿ: ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ರೈತರು, ಜಿಲ್ಲೆಯ ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಡಿಸೆಂಬರ್ 10 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವುದಾಗಿ ತಿಳಿಸಿದರು.
ಪ್ರಸಕ್ತ ವರ್ಷ ಜಿಲ್ಲೆಯ ರೈತರು ಬರಗಾಲಕ್ಕೆ ತುತ್ತಾಗಿ, ಆನಂತರ ಅತಿವೃಷ್ಠಿಯಿಂದ ಬೆಳೆ ಕಳೆದುಕೊಳ್ಳುವ ಸ್ಥಿತಿ ಬಂದೊದಗಿತ್ತು. ಆದರೆ, ಸರ್ಕಾರ ಈವರೆಗೆ ಬೆಳೆ ವಿಮೆ ಅಥವಾ ಬೆಳೆ ನಷ್ಟ ಪರಿಹಾರ ನೀಡಿಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕ್ರಕರ್ತರು ಆಕ್ರೋಶ ವ್ಯಕ್ತಪಡಿಸಿದರು.
2022-23ನೇ ಸಾಲಿನಲ್ಲಿ ಅತಿವೃಷ್ಠಿ ಉಂಟಾಗಿ ಸರ್ಕಾರ ರೈತರ ಖಾತೆಗಳಿಗೆ ಜಮೆ ಮಾಡಲು ಬಿಡುಗಡೆ ಮಾಡಿದ್ದ ೪೬ ಕೋಟಿ ರೂ.ಗಳನ್ನು ಬೇನಾಮಿ ಖಾತೆಗಳಿಗೆ ಹಾಕಿಕೊಂಡಿರುವ ಬಗ್ಗೆ ದೂರು ದಾಖಲಾಗಿತ್ತು. ಆದರೆ, ಈ ಬಗ್ಗೆ ಈವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ
2022-23ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆವಿಮೆಯಲ್ಲಿ ರೈತರಿಗೆ ಮೋಸ ಆಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸರ್ಕಾರ ಘೋಷಣೆ ಮಾಡಿರುವ ಎಲ್ಲ ಬೆಳೆಗಳನ್ನು ಖರೀದಿಸಲು ವರ್ಷಪೂರ್ತಿ ಖರೀಧಿ ಕೇಂದ್ರ ತೆರೆದಿರಬೇಕು. ರೈತರು ಬೆಳೆದ ಎಲ್ಲ ಧವಸ, ಧಾನ್ಯಗಳನ್ನು ಮಿತಿ ಹಾಕದಂತೆ ಖರೀದಿಸಬೇಕು ಎಂದು ಆಗ್ರಹಿಸಿದರು.
ಖಾಸಗಿ ಶಾಲೆಗಳಲ್ಲಿ ಶುಲ್ಕದ ಹೆಸರಿನಲ್ಲಿ ನಡೆಯುತ್ತಿರುವ ದುರಾಡಳಿತ ಸರಿಯಾಗಿಲ್ಲ, ಕೊಳವೆ ಬಾವಿ ಕೊರೆಯುವ ಯಂತ್ರಗಳಿಗೆ ದರ ನಿಗಧಿ ಮಾಡಿಲ್ಲ. ಬೆಳೆ ಕಟಾವು ಮತ್ತು ಪೆಂಡಿ ಕಟ್ಟುವ ಯಂತ್ರಗಳಿಗೆ ನಿಗಧಿ ಮಾಡಿರುವ ದರ ಅನುಷ್ಠಾನಗೊಂಡಿಲ್ಲ ಎಂದು ದೂರಿದರು.
ಹೊಳಲ್ಕೆರೆ ತಾಲೂಕು ಈಚಘಟ್ಟ ಗ್ರಾಮದಲ್ಲಿ ಅಳವಡಿಸಿರುವ ಸೋಲಾರ್ ಪ್ಲಾಂಟ್ ತೆರಿಗೆಯನ್ನು ಅದೇ ಗ್ರಾಮದ ಅಭಿವೃದ್ಧಿಗೆ ಬಳಸಿಕೊಳ್ಳಲು ಅವಕಾಶ ನೀಡಬೇಕು ಎಂದು ರೈತರು ಒತ್ತಾಯಿಸಿದರು.
ಇದನ್ನೂ ಓದಿ: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಹಲವು ಸಲ ಮನವಿ ಸಲ್ಲಿಸಿದರೂ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿಯಲ್ಲಿ ಡಿ.೧೦ ರಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ, ರೈತ ಮುಖಂಡರಾದ ಕರೆಸಿದ್ದಯ್ಯ, ಸತೀಶ್, ಸಿದ್ದರಾಮಣ್ಣ, ಜಯ್ಯಣ್ಣ, ರಂಗಸ್ವಾಮಿ, ಸಣ್ಣ ತಿಮ್ಮಣ್ಣ, ವೀರಭದ್ರಪ್ಪ, ರಾಮಣ್ಣ, ಮಂಜುನಾಥ್, ಕುಮಾರಣ್ಣ, ಪ್ರಸನ್ನ, ವೆಂಕಟೇಶ್, ತಿಮ್ಮಯ್ಯ, ಗೋವಿಂದಪ್ಪ, ರಾಮಣ್ಣ, ನಿಂಗಪ್ಪ, ಸಣ್ಣ ಕರಿಯಪ್ಪ, ದಾಸಪ್ಪ ಮತ್ತಿತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
