CHITRADURGA NEWS | 10 MARCH 2026
ಚಿತ್ರದುರ್ಗ: ಹೂವಿನ ಮಾರುಕಟ್ಟೆಯಲ್ಲಿ ರೈತರಿಂದ ಹೂವು ಖರೀಧಿಸುವಾಗ ಅಳತೆಯಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರು ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ರಾಜ್ಯಾದ್ಯಂತ ಶಿವಶಿಂಪಿ ಸಮಾಜದ ಸಂಘಟನೆ | ಮಂದಾರ ಮಠದ ಮಹಾಂತ ದೇವರು
ರೈತ ಸಂಘದ ನೇತೃತ್ವದಲ್ಲಿ ಹೂವಿನ ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿ, ತಮಗೆ ಆಗುತ್ತಿರುವ ವಂಚನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ರೈತರಿಂದ ಹೂವು ಖರೀಧಿಸುವಾಗ ಅಳತೆಯಲ್ಲಿ ಮೋಸ ಆಗುತ್ತಿದೆ ಎಂದು ಆರೋಪಿಸಿ ಹಲವು ಬಾರಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದರು.
ರೈತರಿಂದ ಖರೀಧಿಸುವ ಹೂವಿಗೆ ಪ್ರತಿ ಮಾರಿಗೆ 15 ರಿಂದ 16 ಅಡಿಗಳನ್ನು ಅಳತೆ ಮಾಡಲಾಗುತ್ತಿದೆ. ಆದರೆ, ಈ ಹಿಂದೆ ಜಿಲ್ಲಾಧಿಕಾರಿಗಳು ಹೂವಿನ ಮಾರುಕಟ್ಟೆಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಿ ಪ್ರತಿ ಮಾರಿಗೆ ೬ ಅಡಿ ಲೆಕ್ಕ ಹಾಕಬೇಕು ಎಂದು ಸೂಚನೆ ನೀಡಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 10 ಮಾರ್ಚ್ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್
ಈಗಲೂ ಒಂದು ಮಾರು ಹೂವಿಗೆ 15 ರಿಂದ 16 ಅಡಿ ಲೆಕ್ಕ ಹಾಕುತ್ತಿದ್ದು, ಇದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಹೂ ಬೆಳೆಯುವ ರೈತರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ರೈತ ಸಂಘದ ಹುಣಸೆಕಟ್ಟೆ ಅಧ್ಯಕ್ಷ ಎನ್.ಎಸ್.ರಂಗೇಗೌಡ, ಕೆ.ಎಂ.ಕಾಂತರಾಜು, ಸಿದ್ದರಾಮಣ್ಣ ಮುದಾಪುರ, ಬಸ್ತಿಹಳ್ಳಿ ಸುರೇಶ್ ಬಾಬು, ಡಿ.ಓಂಕಾರಪ್ಪ, ಪಿ.ಆರ್.ಮಾರುತಿ, ಎ.ತಿಪ್ಪೇಸ್ವಾಮಿ, ಮಹಾಂತೇಶ್, ಪುಟ್ಟಯ್ಯ, ನಾಗರಾಜ ಎಂ.ಬಿ,ಧನಂಜಯ ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
