By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Celebration of the Jayanti of Sharanas Hoogara Madayya and Hendaada Marayya
    ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
    5 hours ago
    BJP District General Secretary G.H. Mohan spoke at the press conference
    ಸೆ.30ರಂದು ಚಿತ್ರದುರ್ಗದಲ್ಲಿ ಮಾದಿಗ ಮುನ್ನಡೆ-2 ಜಿಲ್ಲಾ ಸಮಾವೇಶ
    5 hours ago
    KPCC spokesperson G.B. Balakrishnaswamy Yadav spoke at the press conference
    ಎಸ್‌ಐಆರ್‌ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
    5 hours ago
    ಜೈನ್, ಬೌದ್ಧ, ಸಿಖ್ ಧಾರ್ಮಿಕ ಸೇವಕರಿಗೆ ಮಾಸಿಕ ಗೌರವಧನ | ಅರ್ಜಿ ಆಹ್ವಾನ
    17 hours ago
    Karnataka State Open University
    ಕೆಎಸ್‌ಒಯು ಪ್ರವೇಶಾತಿ | ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 hours ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    6 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 hours ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Iodine
    ಅಯೋಡಿನ್ ಕೊರತೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸಿ
    16 hours ago
    Eat these 5 things for breakfast to improve gut health
    ಕರುಳಿನ ಆರೋಗ್ಯವನ್ನು ಸುಧಾರಿಸಲು ಉಪಾಹಾರದಲ್ಲಿ ಈ 5 ವಸ್ತುಗಳನ್ನು ಸೇವಿಸಿ
    17 hours ago
    Herbal tea
    ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಗಿಡಮೂಲಿಕೆ ಚಹಾ ಕುಡಿಯಿರಿ
    2 days ago
    Smoke from benzoin incense
    ಸಾಂಬ್ರಾಣಿ ಧೂಪದ ಹೊಗೆ ಕೂದಲಿಗೆ ಒಳ್ಳೆಯದೇ? ತಿಳಿಯಿರಿ 
    2 days ago
    clean and clear skin
    ಕ್ಲೀನ್ ಆ್ಯಂಡ್ ಕ್ಲಿಯರ್ ಸ್ಕಿನ್ ಬೇಕಾ? ಹಾಗಾದ್ರೆ ಮನೆಯಲ್ಲಿಯೇ ತಯಾರಿಸಬಹುದಾದ ಈ ನೈಸರ್ಗಿಕ ಫೇಸ್‌ವಾಶ್ ಬಳಸಿ
    3 days ago
Reading: ಮಳೆ ಅಭಾವದಿಂದ ಹೊಸದುರ್ಗ ರೈತರು ಸಂಕಷ್ಟದಲ್ಲಿ | ಬೆಳೆ ನಷ್ಟ ಸಮೀಕ್ಷೆಗೆ ಆದೇಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಳೆ ಅಭಾವದಿಂದ ಹೊಸದುರ್ಗ ರೈತರು ಸಂಕಷ್ಟದಲ್ಲಿ | ಬೆಳೆ ನಷ್ಟ ಸಮೀಕ್ಷೆಗೆ ಆದೇಶ

News Desk Chitradurga News
Last updated: 7 August 2026 20:06
News Desk Chitradurga News
2 months ago
Share
ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
SHARE

CHITRADURGA NEWS | 07 AUGUST 2026

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನಲ್ಲಿ ವಾಡಿಕೆಗಿಂತ ಶೇ.50 ರಷ್ಟು ಮಳೆ ಕೊರತೆಯಾಗಿದ್ದು, ರಾಗಿ ಹಾಗೂ ಸಾವೆ ಬೆಳೆಯುವ ರೈತರು ಸಂಕಷ್ಟದಲ್ಲಿ ಇದ್ದಾರೆ. ಇದರೊಂದಿಗೆ ರೋಗಬಾದೆ ತುತ್ತಾಗಿ ನಷ್ಟಕ್ಕೆ ಒಳಗಾದ ತೆಂಗು ಬೆಳೆ ರೈತರಿಗೆ ನೆರವು ಒದಗಿಸುವಂತೆ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ 

ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಗಿ ಬೆಳೆಗೆ ಆಗಸ್ಟ್ 14ರ ವರೆಗೆ ಬೆಳೆ ವಿಮೆ ನೊಂದಣಿಗೆ ಅವಕಾಶವಿದೆ. ಹೆಚ್ಚಿನ ರೈತರು ನೊಂದಣಿಗೆ ಕ್ರಮ ಕೈಗೊಳ್ಳಬೇಕು. ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ತೆಂಗು ವಿಸ್ತರಣೆ ಕಾರ್ಯಕ್ರಮದ ಅನುಷ್ಠಾನಕ್ಕೂ ಮೊದಲು, ತೆಂಗು ಬೆಳೆಯಲ್ಲಿ ನಷ್ಟ ಹೊಂದಿದ ರೈತರಿಗೆ ಪರಿಹಾರ ಕೊಡಿಸುವ ಕೆಲಸವಾಗಬೇಕು. ತೆಂಗುಗೆ ವಿಮೆ ಸೌಲಭ್ಯ ಒದಗಿಸಲು ಮಂಡಳಿಗೆ ಶಿಫಾರಸ್ಸು ಮಾಡಬೇಕು. ತಾಲ್ಲೂಕಿನಾದ್ಯಂತ ತೆಂಗು ಬೆಳೆ ನಷ್ಟದ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮಗ್ರ ಸರ್ವೇ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಟಿ.ರಘುಮೂರ್ತಿ ನಿರ್ದೇಶಿಸಿದರು.

ಜವರಿಯಿಂದ ಆಗಸ್ಟ್ ವರೆಗೆ ತಾಲ್ಲೂಕಿನಲ್ಲಿ 283.4 ಮಿ.ಮೀ ವಾಡಿಕೆ ಮಳೆಯ ನಿರೀಕ್ಷೆ ಇತ್ತು. ಆದರೆ 174.44 ಮಿ.ಮೀ. ಮಳೆಯಾಗಿದೆ. ಮುಂಗಾರು ಅವಧಿಯಲ್ಲಿ 151.2 ಮಿ.ಮೀ. ಮಳೆಯ ನಿರೀಕ್ಷೆ ಇತ್ತು, 76.4 ಮಿ.ಮೀ. ಮಳೆ ಬಿದ್ದದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಶೇ.49 ಹೆಚ್ಚು ಮಳೆಯ ಕೊರತೆಯಾಗಿದೆ. 52,788 ರೈತರು ಇದ್ದು, ಈ ಪೈಕಿ 22,987 ರೈತರು ಫಸಲ್ ವಿಮಾ ಯೋಜನೆಯಡಿ ನೊಂದಣಿ ಮಾಡಿದ್ದಾರೆ. 52,900 ಹೆಕ್ಟೇರ್ ಕೃಷಿ ಭೂಮಿ ಪೈಕಿ 11,439 ಹೆಕ್ಟೆರ್‍ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಶೇ.21.59 ಗುರಿ ಸಾಧನೆಯಾಗಿದೆ. ರಾಗಿ ಪ್ರಮುಖ ಕೃಷಿ ಬೆಳೆಯಾಗಿದೆ, ಆದರೆ ಈ ಬಾರಿ ಸಾವೆ ಬೆಳೆ ವಿಸ್ತೀರ್ಣ ಹೆಚ್ಚಾಗಿದ್ದು 7325 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಮಾಹಿತಿ ನೀಡಿದರು.

ಇದನ್ನೂ ಓದಿ: ಮಳೆ ಮಾಪಕಗಳ ದುರಸ್ಥಿಗೆ ಸಚಿವ ಟಿ.ರಘುಮೂರ್ತಿ ಸೂಚನೆ

ಹೊಸದುರ್ಗ ತಾಲ್ಲೂಕಿನಲ್ಲಿ 40,991 ಹೆಕ್ಟೆರ್ ತೋಟಗಾರಿಕೆ ಬೆಳೆಯಿದ್ದು, ಈ ಪೈಕಿ 32,000 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಿದೆ. ಸಣ್ಣ ಹಿಡುವಳಿ ಹೊಂದಿದ 81,900 ತೋಟಗಾರಿಕೆ ರೈತರಿದ್ದಾರೆ. ಹವಮಾನ ಆಧಾರಿತ ವಿಮೆಯಲ್ಲಿ ತೆಂಗು ಬೆಳೆಗೆ ವಿಮೆ ಸೌಲಭ್ಯವಿಲ್ಲ. ಇದರ ಹೊರತಾಗಿ ಅಡಿಕೆ, ಮಾವು ದಾಳಿಂಬೆ, ಈರುಳ್ಳಿ ಬೆಳೆದ 6,700 ರೈತರು ಮಾತ್ರ ಬೆಳೆ ಮಿಮೆ ಮಾಡಿಸಿದ್ದಾರೆ.

ಈ ಭಾಗದಲ್ಲಿ ತೆಂಗು ಬೆಳೆಗೆ, ಬಿಳಿ ನೊಣ(ವೈಟ್ ಫ್ಲೈ) ಕಪ್ಪು ತಲೆ ಹುಳುವಿನ ಬಾದೆ ಹೆಚ್ಚಾಗಿದೆ. ಇದರೊಂದಿಗೆ ಕಾಂಡ ಸೋರುವ ರೋಗವು ಅಧಿಕವಾಗಿದೆ. ಕಪ್ಪು ತಳೆ ಹುಳುವಿನ ಬಾದೆಯಿಂದ ತೆಂಗಿನ ಇಳುವರಿ ಶೇ.90 ರಷ್ಟು ಕುಸಿಯುತ್ತದೆ. ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ತೆಂಗು ಪುನಶ್ಚೇತನ ಕಾರ್ಯಕ್ರಮದಲ್ಲಿ ಹೊಸದಾಗಿ ತೆಂಗು ನಾಟಿ ಮಾಡುವ ರೈತರಿಗೆ ಸಹಾಯಧನ ನೀಡಲಾಗುತ್ತಿದೆ. ಕೀಟ ಬಾದೆಗೆ ಬೇವಿನ ಹಿಂಡಿ ಸಿಂಪರಣೆಗೆ ನೀಡಲಾಗಿದೆ. ಈ ಬಾರಿ ತೆಂಗು ಬೆಳೆಗೆ ವಿಮೆ ಸೌಲಭ್ಯ ಕಲ್ಪಿಸುವಂತೆ ಮಂಡಳಿಗೆ ಶಿಫಾರಸ್ಸು ಮಾಡುವುದಾಗಿ ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ತಿಳಿಸಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಎ(ಕೃಷಿ), ಬಿ(ತೋಟಗಾರಿಕೆ) ಹಾಗೂ ಎ+ಬಿ(ಕೃಷಿ ಮತ್ತು ತೋಟಗಾರಿಕೆ) ಮಾದರಿಯಲ್ಲಿ ರೈತರ ವರ್ಗೀಕರಣ ಮಾಹಿತಿ ಸಂಗ್ರಹಿಸಬೇಕು. ವಿಸ್ತೀರ್ಣವಾರು ಬೆಳೆ ವಿವರಗಳನ್ನು ನೀಡಬೇಕು. ಮುಂಬರುವ ದಿನಗಳಲ್ಲಿ ಬರ ಘೋಷಣೆಯಾದರೆ ರೈತರಿಗೆ ಪರಿಹಾರ ನೀಡಲು ಈ ಮಾಹಿತಿಗಳು ಉಪಯುಕ್ತವಾಗಲಿವೆ. ತಾಲ್ಲೂಕಿನಲ್ಲಿರುವ ಮಳೆ ಮಾಪನ ಕೇಂದ್ರಗಳ ನಿರ್ವಹಣೆ ಮಾಡುವಂತೆ ಸಚಿವ ಟಿ.ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?

ಬರ ನಿರ್ವಹಣೆಗೆ ಅಗತ್ಯ ಪರಿಹಾರಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಆಗ್ರಹ: 

ತಾಲೂಕಿನಲ್ಲಿ ತೀವ್ರ ಮಳೆ ಅಭಾವದಿಂದಾಗಿ ರಾಗಿ, ಸಾವೆ ಸೇರಿದಂತೆ ಪ್ರಮುಖ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ಕುಡಿಯುವ ನೀರು ಹಾಗೂ ಮೇವಿನ ಅಭಾವ ಎದುರಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಭೀಕರವಾಗುವ ಲಕ್ಷಣಗಳಿದ್ದು, ಸರ್ಕಾರ ತಕ್ಷಣವೇ ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಆಗ್ರಹಿಸಿದರು.

ತಾಲೂಕಿನ ಪ್ರಮುಖ ಬೆಳೆಯಾದ ಸಾವೆಯನ್ನು ಬಿತ್ತನೆ ಮಾಡಲಾಗಿದ್ದರೂ ಮಳೆಯಿಲ್ಲದೆ ಕಟಾವಿಗೆ ಬಾರದೆ ಒಣಗಿಹೋಗಿದೆ. ಇನ್ನು ರಾಗಿ ಬಿತ್ತನೆ ಮಾಡಲು ರೈತರು ಸಿದ್ಧರಿದ್ದರೂ ಮಳೆ ಬಾರದೆ ಬಿತ್ತನೆಯೇ ಸಾಧ್ಯವಾಗಿಲ್ಲ. ತೋಟಗಾರಿಕೆ ಬೆಳೆಗಳಾದ ತೆಂಗು ಮತ್ತು ಅಡಿಕೆ ತೋಟಗಳು ನೀರಿನ ಅಭಾವದಿಂದ ಒಣಗಿ ನಾಶವಾಗುತ್ತಿವೆ. ತಾಲೂಕಿನಲ್ಲಿ ಈಗಾಗಲೇ ಬೋರ್‍ವೆಲ್‍ಗಳನ್ನು ಕೊರೆಸಿ ನೀರಿನ ವ್ಯವಸ್ಥೆ ಮಾಡಲಾಗಿದೆ. 

ಸರ್ಕಾರ ಪ್ರಸ್ತುತ ಬಿಡುಗಡೆ ಮಾಡಿರುವ ರೂ.1 ಕೋಟಿ ಅನುದಾನದಲ್ಲಿ ಅಗತ್ಯವಿರುವ ಕಡೆ ಪೈಪ್‍ಲೈನ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಿ ತಕ್ಷಣವೇ ಜನರಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೊಸದುರ್ಗ ಸೇರಿದಂತೆ ತಾಲ್ಲೂಕಿನ 13 ಹೋಬಳಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಕಲ್ಲೋಡ್ ಬ್ಯಾರೇಜ್ ಬರಿದಾಗುತ್ತಿದೆ. 

ಇದನ್ನೂ ಓದಿ: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಜಿಲ್ಲೆಯ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ 5 ಟಿ.ಎಂ.ಸಿ ನೀರು ಹರಿಸಲು ವಿಕೋಪ ಪರಿಹಾರಗಳ ಸಚಿವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಬೇಕು. ಹೊಸದುರ್ಗ ಪಟ್ಟಣ 23 ವಾರ್ಡ್‍ಗಳಿಗೆ 24*7 ಕುಡಿಯುವ ನೀರು ಸಬರಾಜು ಮಾಡಲು ನಗರೋತ್ಥಾನ ಯೋಜನೆಯಡಿ ರೂ.25 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಿ, ಅನುಮೋದನೆ ಕಳುಹಿಸಲಾಗಿದೆ. ಕೂಡಲೇ ಅನುಮೋದನೆ ದೊರೆಯುವಂತೆ ಮಾಡಬೇಕು ಎಂದರು.

ಭದ್ರಾ ಹರಿವಿಗೆ ಆಗಸ್ಟ್ 17 ರ ಗಡುವು:

ಭದ್ರಾ ಮೇಲ್ದಂಡೆ ಯೋಜನೆಯಡಿ ಗೋನೂರು ಅಕ್ವಾಡೆಕ್ಟ್ ವರೆಗೆ ಪ್ರಾಯೋಗಿಕ ಹರಿಸುವ ಕಾಮಗಾರಿಯನ್ನು ಆಗಸ್ಟ್ 17ರ ಒಳಗೆ ಪೂರ್ಣಗೊಳಿಸಲು ಸಚಿವ ಟಿ.ರಘುಮೂರ್ತಿ ಗಡುವು ವಿಧಿಸಿದರು.

ಪ್ರಾಯೋಗಿಕ ಹರಿಸಲು ಕಳೆದ 6 ತಿಂಗಳಿಂದ ಪ್ರಯತ್ನಿಸಲಾಗುತ್ತಿದೆ. ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಅಧಿಕಾರಿಗಳು ಎಲ್ಲಾ ಅಡೆ ತಡೆಗಳನ್ನು ನಿವಾರಿಸಿ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಶಾಸಕರು ಮತ್ತೊಮ್ಮೆ ಕಾಮಗಾರಿ ಪರಿಶೀಲಿಸಿ, ಮುಖ್ಯಮಂತ್ರಿಗಳನ್ನು ಕಾರ್ಯಕ್ರಮದ ಚಾಲನಗೆ ಆಹ್ವಾನಿಸುವುದಾಗಿ ತಿಳಿಸಿದರು. 

ಇದನ್ನೂ ಓದಿ: ಬುದ್ಧನ ಕಂಚಿನ ವಿಗ್ರಹಗಳ ವಿತರಣೆ | ವಿದ್ಯಾರ್ಥಿಗಳಿಗೆ ಸಾಧನೆಯ ಸಂದೇಶ

ಜಲಾಶಯಗಳಿಂದ ಕುಡಿಯವ ನೀರಿನ ಹೊರತಾಗಿ, ಬೆಳೆಗಳಿಗೆ ನೀರು ಹರಿಸದಿರಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಬರಗಾಲ ಇರುವುದರಿಂದ ಹೊಸದುರ್ಗ ತಾಲ್ಲೂಕು ಸೇರಿದಂತೆ ಜಿಲ್ಲೆಯ ಕುಡಿಯುವ ನೀರಿನ ಅಗತ್ಯತೆಗೆ ಭದ್ರಾ ಜಲಾಶಯದಿಂದ 5 ಟಿ.ಎಂ.ಸಿ ನೀರು ಬಿಡಲು ಪತ್ರ ಬರೆಯಬೇಕು ನಿರ್ದೇಶಿಸಿದರು.  

ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಪಿಡಿಒಗಳು ಪ್ರತಿಯೊಂದು ಗ್ರಾಮಕ್ಕೂ ವೈಯಕ್ತಿಕವಾಗಿ ಭೇಟಿ ನೀಡಿ, ಸಾರ್ವಜನಿಕರ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಬೇಕು. ವಿಬಿ ಜಿ ರಾಮ್ ಅಡಿ ಪ್ರತಿಗಾಮ ಪಂಚಾಯಿತಿ ಮುಂದೆ ಲಭ್ಯವಿರುವ ಉದ್ಯೋಗದ ಮಾಹಿತಿಯನ್ನು ಪ್ರಚುರ ಪಡಿಸಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ಸಭೆಯಲ್ಲಿ ಕುಡಿಯುವ ನೀರು ಸರಬರಾಜು, ರಸ್ತೆ ಗುಂಡಿಗಳನ್ನು ಮುಚ್ಚುವುದು ಹಾಗೂ ಮೇವು ಲಭ್ಯತೆ ಕುರಿತು ಅಗತ್ಯ ಮಾಹಿತಿಗಳನ್ನು ಪಡೆದ ಸಚಿವರು ಆಗಸ್ಟ್ 30 ಒಳಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ನಿರ್ದೇಶಿಸಿದರು.

ಇದನ್ನೂ ಓದಿ: ಮೌಲ್ಯ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ | ಡಯಟ್ ಉಪನ್ಯಾಸಕಿ ಶಿವಲೀಲ

ಸಭೆಗೂ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಾಲ್ಲೂಕಿನ ಆಗಲಕೆರೆ ಹಾಗೂ ಕಲ್ಕರೆ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದರು.

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣಗಂಜಿಗಟ್ಟೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಉಪವಿಭಾಗಾಧಿಕಾರಿ ಕಾಂತರಾಜ್, ಜಿ.ಪಂ.ಉಪಕಾರ್ಯದರ್ಶಿ ಬಾಬು, ಪಶು ಪಾಲನೆ ಹಾಗೂ ವೈದ್ಯಕೀಯ ಇಲಾಖೆ ಉಪನಿರ್ದೇಶಕ ತಿಪ್ಪೇಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಅಭಿಯಂತರ ಅಮರನಾಥ್ ಜೈನ್,ಹೊಸದುರ್ಗ ತಹಶೀಲ್ದಾರ್ ತಿರುಪತಿ ಪಾಟೀಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHosadurgaMinister T. RaghumurthyRain Deficiencyಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಳೆ ಅಭಾವಸಚಿವ ಟಿ.ರಘುಮೂರ್ತಿಹೊಸದುರ್ಗ
Share This Article
Facebook Email Print
Previous Article ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ 
Next Article ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026 ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026 | 146 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Leave a Comment

Leave a Reply Cancel reply

Your email address will not be published. Required fields are marked *

Celebration of the Jayanti of Sharanas Hoogara Madayya and Hendaada Marayya
ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
ಮುಖ್ಯ ಸುದ್ದಿ
BJP District General Secretary G.H. Mohan spoke at the press conference
ಸೆ.30ರಂದು ಚಿತ್ರದುರ್ಗದಲ್ಲಿ ಮಾದಿಗ ಮುನ್ನಡೆ-2 ಜಿಲ್ಲಾ ಸಮಾವೇಶ
ಮುಖ್ಯ ಸುದ್ದಿ
KPCC spokesperson G.B. Balakrishnaswamy Yadav spoke at the press conference
ಎಸ್‌ಐಆರ್‌ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
ಮುಖ್ಯ ಸುದ್ದಿ
Power outage on May 1
ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up