By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ

ಮುಖ್ಯ ಸುದ್ದಿ

ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ

News Desk Chitradurga News
Last updated: 1 July 2025 20:29
News Desk Chitradurga News
9 hours ago
Share
ಬೆಳೆವಿಮೆ
ಬೆಳೆವಿಮೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 JULY 2025

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

Also Read: ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌

ಗ್ರಾಮ ಪಂಚಾಯಿತಿ ಮಟ್ಟದ ವಿಮಾ ಘಟಕಕ್ಕೆ ಚಳ್ಳಕೆರೆ ತಾಲ್ಲೂಕಿಗೆ ಶೇಂಗಾ (ಮಳೆಯಾಶ್ರಿತ), ಚಿತ್ರದುರ್ಗ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಹಿರಿಯೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ) ಮತ್ತು ಸೂರ್ಯಕಾಂತಿ (ಮಳೆಯಾಶ್ರಿತ), ಹೊಳಲ್ಕೆರೆ ತಾಲ್ಲೂಕಿಗೆ ಮುಸುಕಿನ ಜೋಳ (ಮಳೆಯಾಶ್ರಿತ) ಮತ್ತು ರಾಗಿ (ಮಳೆಯಾಶ್ರಿತ) ಮೊಳಕಾಲ್ಮೂರು ತಾಲ್ಲೂಕಿಗೆ ನೆಲಗಡಲೆ (ಶೇಂಗಾ) (ಮಳೆಯಾಶ್ರಿತ), ಹೊಸದುರ್ಗ ತಾಲ್ಲೂಕಿಗೆ ರಾಗಿ (ಮಳೆಯಾಶ್ರಿತ) ಬೆಳೆಗಳನ್ನು ಮುಂಗಾರು ಹಂಗಾಮಿಗೆ ಬೆಳೆ ವಿಮೆಗೆ ಅಧಿಸೂಚನೆ ಮಾಡಲಾಗಿದೆ.

ಹೋಬಳಿ ಮಟ್ಟದ ವಿಮಾ ಘಟಕಗಳಿಗೆ ಹತ್ತಿ (ನೀರಾವರಿ), ಹತ್ತಿ (ಮಳೆಯಾಶ್ರಿತ), ಹೆಸರು (ಮಳೆಯಾಶ್ರಿತ) ಶೇಂಗಾ(ಮಳೆಯಾಶ್ರಿತ), ಶೇಂಗಾ (ನೀರಾವರಿ), ಹುರುಳಿ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಈರುಳ್ಳಿ (ಮಳೆಯಾಶ್ರಿತ), ಭತ್ರ (ನೀರಾವರಿ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ರಾಗಿ (ನೀರಾವರಿ), ರಾಗಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ನೀರಾವರಿ), ಜೋಳ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಧಿಸೂಚನೆ ಮಾಡಲಾಗಿದೆ.

(ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ)

Also Read: SSLC ಪರೀಕ್ಷೆ-3 | ಜುಲೈ 5 ರಿಂದ ಆರಂಭ | ಜಿಲ್ಲೆಯಲ್ಲಿ 24 ಪರೀಕ್ಷಾ ಕೇಂದ್ರ | 7453 ವಿದ್ಯಾರ್ಥಿಗಳು

ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ಆಸಕ್ತ ರೈತರು ಬೆಳೆ ವಿಮೆಗೆ ನೋಂದಣಿ ಮಾಡಲು ಹೆಸರು (ಮಳೆಯಾಶ್ರಿತ), ಮತ್ತು ಈರುಳ್ಳಿ (ನೀರಾವರಿ), ಬೆಳೆಗಳಿಗೆ ದಿನಾಂಕ:15-07-2025 ಮತ್ತು ಹತ್ತಿ (ನೀರಾವರಿ) ಹತ್ತಿ (ಮಳೆಯಾಶ್ರಿತ), ಶೇಂಗಾ (ನೀರಾವರಿ), ಶೇಂಗಾ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ), ಮೆಕ್ಕೆಜೋಳ (ನೀರಾವರಿ), ಮೆಕ್ಕೆಜೋಳ (ಮಳೆಯಾಶ್ರಿತ), ಈರುಳ್ಳಿ (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಜೋಳ (ಮಳೆಯಾಶ್ರಿತ), ಜೋಳ (ನೀರಾವರಿ), ಸೂರ್ಯಕಾಂತಿ (ನೀರಾವರಿ), ಸೂರ್ಯಕಾಂತಿ (ಮಳೆಯಾಶ್ರಿತ), ಟೊಮ್ಯಾಟೊ ಬೆಳೆಗಳಿಗೆ ದಿನಾಂಕ: 31-07-2025ರಂದು ಹಾಗೂ ನವಣೆ (ಮಳೆಯಾಶ್ರಿತ) ಭತ್ತ (ನೀರಾವರಿ), ರಾಗಿ (ಮಳೆಯಾಶ್ರಿತ), ರಾಗಿ (ನೀರಾವರಿ) ಬೆಳೆಗಳಿಗೆ ದಿನಾಂಕ:16-08-2025 ಕೊನೆಯ ದಿನಾಂಕವಾಗಿರುತ್ತದೆ.

ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಆರ್ಥಿಕ ಸಂಸ್ಥೆಗಳು/ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ (Common Service Centers)ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಟಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂಗಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.

Also Read: ಹೊಸದುರ್ಗಕ್ಕೆ ನೀರು ಹರಿಸಲು IISC ಗ್ರೀನ್‌ ಸಿಗ್ನಲ್‌ | ನಾಲೆ, ಜಲಾಶಯಕ್ಕೆ ತೊಂದರೆ ಇಲ್ಲ

ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ Oriental General Insurance Company,, ಅನುಷ್ಟಾನ ಸಂಸ್ಥೆಯಾಗಿರುತ್ತದೆ. ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು.

ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಾಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ. ಇದಕ್ಕೆ ಅವಕಾಶ ಕೊಡದೇ ಸಕಾಲದಲ್ಲಿ ನೋಂದಾವಣೆ ಮಾಡಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatescottonCropFasal Bhima YojanaGroundnutIrrigationKannada Latest NewsKannada NewsMaizeMonsoon SeasonRegistrationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನೀರಾವರಿನೋಂದಣಿಫಸಲ್ ಭೀಮಾ ಯೋಜನೆಬೆಳೆಮುಂಗಾರು ಹಂಗಾಮುಮೆಕ್ಕೆಜೋಳಶೇಂಗಾಹತ್ತಿ
Share This Article
Facebook Email Print
Previous Article ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
Next Article ಅರ್ಜಿ ಅಹ್ವಾನ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ವಿಟಮಿನ್-ಡಿ ಪೂರಕಗಳನ್ನು ತೆಗೆದುಕೊಳ್ಳುವವರು ಈ 2 ತಪ್ಪುಗಳನ್ನು ಮಾಡಬೇಡಿ
Life Style
ಪ್ರತಿದಿನ ಹಾಲು ಕುಡಿಯುವುದರಿಂದ ಮಕ್ಕಳ ಎತ್ತರ ಹೆಚ್ಚಾಗುತ್ತದೆಯೇ?
Life Style
ಹೊಳೆಯುವ ಕೂದಲಿಗಾಗಿ, ಈ 4 ವಸ್ತುಗಳನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಹಚ್ಚಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up