
CHITRADURGA NEWS | 01 APRIL 2025
ಚಿತ್ರದುರ್ಗ: ಮಗನಿಗೆ ಈಜು ಕಲಿಸಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಅಪ್ಪ ಮತ್ತು ಮಗ ಇಬ್ಬರೂ ಮೃತಪಟ್ಟಿದ್ದಾರೆ.
ಕೃಷಿ ಹೊಂಡದಲ್ಲಿ ಈಜು ಕಲಿಸಲು ಹೋಗಿದ್ದ ವೇಳೆ ತಂದೆ ಹಾಗೂ ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಂಗಾಪುರದಲ್ಲಿ ನಡೆದಿದೆ.

ಇದನ್ನೂ ಓದಿ: ಯುಗಾದಿ ಜೂಜು | ಜಿಲ್ಲೆಯಲ್ಲಿ 850 ಜನರ ಬಂಧನ | ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಚರಣೆ
ಮೃತರನ್ನು ಸಿಂಗಾಪುರ ಗ್ರಾಮದ ಬಸವರಾಜಪ್ಪ(46) ಹಾಗೂ ಪುತ್ರ ಆಕಾಶ್(14) ಎಂದು ಗುರುತಿಸಲಾಗಿದೆ.
ಏ.1 ಮಂಗಳವಾರ ಮಧ್ಯಾಹ್ನದ ವೇಳೆಗೆ ಮಗನಿಗೆ ಈಜು ಕಲಿಸುವ ಸಲುವಾಗಿ ಜಮೀನೊಂದರ ಕೃಷಿ ಹೊಂಡಕ್ಕೆ ಹೋಗಿದ್ದು, ಸಂಜೆ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಇಬ್ಬರು ಸಾವು | ಮೂವರಿಗೆ ಗಾಯ
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ಮೃತರ ದೇಹಗಳನ್ನು ಹೊರಗೆ ತೆಗೆದಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
