CHITRADURGA NEWS | 07 October 2026
ಚಿತ್ರದುರ್ಗ: ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ: ಐಟಿಐ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗಾವಕಾಶ | ಡಿಸಿ ಎಸ್.ರಮ್ಯ
ಚಿತ್ರದುರ್ಗ ತಾಲೂಕಿನ 38 ವರ್ಷದ ಎಂಬ ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳಿಗೆ “ನಿನ್ನ ಸ್ನೇಹಿತೆ ಹುಟ್ಟಿದ ಹಬ್ಬಕ್ಕೆ ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾಳೆ” ಎಂದು ಸುಳ್ಳು ಹೇಳಿ ಮೋಟಾರ್ ಸೈಕಲ್‌ನಲ್ಲಿ ಕರೆದೊಯ್ದಿದ್ದು, ಮಾರ್ಗ ಮಧ್ಯದ ಜಮೀನೊಂದರಲ್ಲಿ ಹೆದರಿಸಿ, ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದನು.
ಬಳಿಕ ಈ ವಿಚಾರ ತಿಳಿದು ಸಿಡಿಪಿಒ (CDPO) ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಪ್ರಕರಣ ದಾಖಲಾಗಿತ್ತು. ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ನಹಿಂ ಅಹಮ್ಮದ್ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ಅವರು, ಆರೋಪದ ಮೇಲಿನ ಅಪರಾಧ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ: ಕಳಪೆ ಹಂಪ್ಸ್ ತೆರವುಗೊಳಿಸಿ ಗುಣಮಟ್ಟದ ಹಂಪ್ಸ್ ಅಳವಡಿಸಿ | ಕರುನಾಡ ವಿಜಯಸೇನೆ
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಚ್.ಆರ್. ಜಗದೀಶ್ ವಾದ ಮಂಡಿಸಿದ್ದರು.
ಪೋಲಿಸ್ ತಂಡಕ್ಕೆ ಪ್ರಶಂಸೆ:
ಈ ಅತಿ ಸೂಕ್ಷ್ಮ ಪ್ರಕರಣವನ್ನು ಯಶಸ್ವಿಯಾಗಿ ತನಿಖೆ ನಡೆಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಶ್ರಮಿಸಿದ ತನಿಖಾಧಿಕಾರಿ ನಹಿಂ ಅಹಮ್ಮದ್, ತನಿಖಾ ಸಹಾಯಕರು, ಕೋರ್ಟ್ ಪೊಲೀಸ್ ಹಾಗೂ ಕೋರ್ಟ್ ಮಾನಿಟರಿಂಗ್ ಸೆಲ್ ವಿಭಾಗದ ಸಿಬ್ಬಂದಿಗಳನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕುಶಲ್ ಚೌಕ್ಸೆ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಆರ್. ಅಭಿನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

