CHITRADURGA NEWS | 19 MAY 2026
ಚಿತ್ರದುರ್ಗ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳನ್ನು ಖರೀದಿಸಲು ‘ಫ್ರೂಟ್ಸ್ ಎಫ್‍ಐಡಿ’ (FRUITS FID) ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಗೋಹತ್ಯೆ ತಡೆಗೆ ಒತ್ತಾಯಿಸಿ ವಿಎಚ್‌ಪಿ, ಬಜರಂಗದಳದಿಂದ ಮನವಿ
ಕೇಂದ್ರ ಸರ್ಕಾರದ ತಂತ್ರಾಂಶದ ಮೂಲಕ ರೈತರ ಎಫ್‍ಐಡಿ ಸಂಖ್ಯೆಯನ್ನು ಬಳಸಿಕೊಂಡು, ಅವರ ಜಮೀನಿನ ವಿಸ್ತೀರ್ಣಕ್ಕೆ (ಎಕರೆಗೆ) ಅಗತ್ಯವಿರುವಷ್ಟು ರಸಗೊಬ್ಬರವನ್ನು ನಿಯಮಾನುಸಾರ ವಿತರಿಸಲು ಕೃಷಿ ಇಲಾಖೆಯು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.2026-27ನೇ ಸಾಲಿನ ಮುಂಗಾರು ಹಂಗಾಮಿನಿಂದಲೇ ಇದು ಜಾರಿಗೆ ಬರಲಿದೆ.
ರೈತರು ತಾವು ಬೆಳೆದ ಬೆಳೆ ಆಧಾರದ ಮೇಲೆ ತಂತ್ರಾಂಶದಲ್ಲಿ ಅನುಮೋದಿಸಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಪಡೆಯಲು ಅವಕಾಶವಿರುತ್ತದೆ.
ಜಿಲ್ಲೆಯ ಎಲ್ಲಾ ರೈತರು ಆದ್ಯತೆಯ ಮೇರೆಗೆ ತಮ್ಮ ಹೆಸರಿನಲ್ಲಿ ‘ಫ್ರೂಟ್ಸ್ ಎಫ್‍ಐಡಿ’ ಮಾಡಿಸಿಕೊಳ್ಳಬೇಕು. ಅಷ್ಟೇ ಅಲ್ಲದೆ, ತಮ್ಮ ಎಲ್ಲಾ ಜಮೀನಿನ ಸರ್ವೆ ನಂಬರ್‍ಗಳನ್ನು ಈ ಎಫ್‍ಐಡಿಗೆ ಕಡ್ಡಾಯವಾಗಿ ಜೋಡಣೆ ಮಾಡಿಸಬೇಕು ಎಂದು ಕೋರಲಾಗಿದೆ.
ಇದನ್ನೂ ಓದಿ: ಜಿಲ್ಲಾಸ್ಪತ್ರೆಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ದಿಢೀರ್ ಭೇಟಿ | ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ
ಈಗಾಗಲೇ ಫ್ರೂಟ್ಸ್ ಎಫ್‍ಐಡಿ ಹೊಂದಿರುವ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಇದರಿಂದ ರಸಗೊಬ್ಬರ ಪಡೆಯುವಾಗ ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಎದುರಾಗುವುದಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
