ಲೋಕಸಮರ 2024
ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ದೂರು ದಾಖಲು
CHITRADURGA NEWS | 24 MARCH 2024
ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಠಾಧೀಶರ ಆಶೀರ್ವಾದ ಪಡೆಯುವ ಉದ್ದೇಶದಿಂದ ಮಾರ್ಚ್ 23 ಶನಿವಾರ ಬಿ.ವೈ.ರಾಘವೇಂದ್ರ ಚಿತ್ರದುರ್ಗಕ್ಕೆ ಆಗಮಿಸಿದ್ದರು.
ಇದನ್ನೂ ಓದಿ: ಮುತ್ತುಗದ ಮರ ಮೈ ತುಂಬಾ ಹೂ ಬಿಟ್ಟರೆ ಏನರ್ಥ ಗೊತ್ತಾ..!
ಈ ವೇಳೆ ಇಲ್ಲಿನ ಭೋವಿ ಗುರುಪೀಠದಲ್ಲಿ ಹಲವು ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು. ಇದೇ ವೇಳೆ ಶಿವಮೊಗ್ಗದಿಂದ ತಮ್ಮ ಜೊತೆಗೆ ಆಗಮಿಸಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಠದಲ್ಲಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಮೂಲಕ ಚುನಾವಣಾ ಪ್ರಚಾರಕ್ಕೆ ಧಾರ್ಮಿಕ ಕೇಂದ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಎಫ್ಐಆರ್ ದಾಖಲಾಗಿದೆ.
ರಾಷ್ಟ್ರ ವಿರೋಧಿ ಶಕ್ತಿಗಳ ವಿರುದ್ಧ ರಾಷ್ಟ್ರಪರ ಚಿಂತನೆ ಮಾಡುತ್ತಿರುವವರು ನಡೆಸುತ್ತಿರುವ ಧರ್ಮ ಯುದ್ಧ ಈ ಚುನಾವಣೆ. ಪ್ರಧಾನಿ ನರೇಂದ್ರ ಮೋದಿ, ಬಿ.ಡಸ್.ಯಡಿಯೂರಪ್ಪ ಅವರ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ನಡೆಸುತ್ತಿರುವ ಹೋರಾಟವಲ್ಲ. ಅಂತಹ ಉದ್ದೇಶವಿಲ್ಲ ಎಂದು ರಾಘವೇಂದ್ರ ಅವರು ಭಾಷಣ ಮಾಡಿದ್ದರು ಎಂದು ಭಾಷಣ ಮಾಡಿದ್ದರು.
ಈ ಸಭೆಯ ವೀಡಿಯೋ ಆಧರಿಸಿ ಚುನಾವಣಾ ಸಿಬ್ಬಂದಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.