
ಚಿತ್ರದುರ್ಗ ನ್ಯೂಸ್.ಕಾಂ: ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಆಯೋಜಿಸಿದ್ದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಗಾಂಧಿ ಹಂತಕ ಗೋಡ್ಸೇ ಭಾವಚಿತ್ರ ಪ್ರದರ್ಶನ ಮಾಡಿದ ಅಪರಿಚಿತರ ಮೇಲೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಕ್ಟೋಬರ್ 8 ಭಾನುವಾರ ನಡೆದ ಶೋಭಾಯಾತ್ರೆ ವೇಳೆ ಲಕ್ಷಾಂತರ ಜನರ ನಡುವೆ ಗೋಡ್ಸೆ ಪೋಟೋ ಪ್ರದರ್ಶನ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 9 ರಂದು ಚಿತ್ರದುರ್ಗದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವವರು ದೂರು ದಾಖಲಿಸಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಕಿಡಿಗೇಡಿಗಳು ಗೋಡ್ಸೆ ಪೋಟೋ ಪ್ರದರ್ಶಿಸಿದ್ದಾರೆ.
ಇದನ್ನೂ ಓದಿ: ಶಿವನಕೆರೆಯಲ್ಲಿರುವ ಶಿವನ ನಿರ್ವಹಣೆ ಧರ್ಮಸ್ಥಳ ಸಂಸ್ಥೆಗೆ

ಈ ರೀತಿ ಶಾಂತಿ ಭಂಗ ಮಾಡಲು ಯತ್ನಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಈಪಿಸಿ 505/1(ಸಿ), 505/1(ಬಿ) ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
