ಮುಖ್ಯ ಸುದ್ದಿ
ಬಾಲ್ಯವಿವಾಹ ಮಾಡಿಸುವ ಪುರೋಹಿತರು, ಶಾಮಿಯಾನ, ಭಾಗಿಯಾದವರ ಮೇಲೂ FIR ಹಾಕಿ
CHITRADURGA NEWS | 26 JUNE 2024
ಚಿತ್ರದುರ್ಗ: ಕಾನೂನಿನನ್ವಯ ಬಾಲ್ಯ ವಿವಾಹಕ್ಕೆ ಕಾರಣಕರ್ತರಾಗುವ ಪುರೋಹಿತರು, ಕಲ್ಯಾಣ ಮಂಟಪದವರು, ಕೆಟರಿಂಗ್, ಶಾಮಿಯಾನ ಸೇರಿದಂತೆ, ಪಾಲ್ಗೊಂಡ ಎಲ್ಲರ ಮೇಲೂ ಮೊಕದ್ದಮೆ ದಾಖಲಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಸೂಚನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣಕ್ಕೆ ತೀರ್ಮಾನ | ಸಚಿವ ಡಿ.ಸುಧಾಕರ್ ಸೂಚನೆ | ಎಲ್ಲ ಶಾಸಕರ ಸಹಮತ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 193 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 102 ತಡೆಯಲಾಗಿದ್ದು, 91 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ. 11 ರಿಂದ 18 ವರ್ಷದ 154 ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳನ್ನು ಗುರುತಿಸಿ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.