CHITRADURGA NEWS | 05 DECEMBER 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಕೈ ಬಿಟ್ಟು ಹೋಗಿರುವ ಕೆರೆಗಳಿಗೂ ನೀರು ತುಂಬಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಒತ್ತಾಯಿಸಿ ಬೆಳಗಾವಿ ಚಲೋ ಹಮ್ಮಿಕೊಂಡಿರುವುದಾಗಿ ರೈತ ಸಂಘದ ಜಿಲ್ಲಾಧ್ಯಕ್ಷ ಲಿಂಗಾವರಹಟ್ಟಿ ಲಕ್ಷ್ಮೀಕಾಂತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 05 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಡಿ.9 ಮಂಗಳವಾರ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನಕ್ಕೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದಿಂದ ಸುವರ್ಣ ಸೌಧ ಚಲೋ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಹೆಚ್ಚಿನ ಅನುದಾನ ನೀಡಿ, ಬರದ ನಾಡು ಚಿತ್ರದುರ್ಗ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳೆ ಹಾನಿ ಪರಿಹಾರ, ಬೆಳೆ ನಷ್ಟ ಪರಿಹಾರ, ಎಲ್ಲಾ ರೀತಿಯ ಬೆಳೆಗಳಿಗೂ ಎಕರೆಗೆ 40 ಸಾವಿರ ಪರಿಹಾರ ನೀಡಬೇಕು. ಬೆಳೆವಿಮೆ ಕಟ್ಟಿರುವ ಎಲ್ಲಾ ರೀತಿಯ ಬೆಳೆಗಳಿಗೂ ಬೆಳೆವಿಮೆ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದರು. ಆದಷ್ಟು ಬೇಗ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಜಿಲ್ಲಾ ಮತ್ತು ತಾಲ್ಲೂಕು, ಹೋಬಳಿ ಮಟ್ಟಗಳಲ್ಲಿ ತೆರೆಯಬೇಕು. ಒಬ್ಬ ರೈತನಿಂದ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಹೇಳಿದರು.
ಗೋಮಾಳ ಅರಣ್ಯ ಭೂಮಿ, ಬಗುರ್‌ಹುಕುಂ, ಸೇಂದಿವನ, ಹುಲ್ಲುಬನ್ನಿ ಖರಾಬ್, ಸಾಗುವಳಿ ಮಾಡಿರುವಂತಹ ರೈತರಿಗೆ ಶೀಘ್ರವಾಗಿ ಹಕ್ಕುಪತ್ರಗಳನ್ನು ನೀಡಬೇಕು. ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು.
ಇದನ್ನೂ ಓದಿ: ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದನಾ ರಾಕ್ಷಸ ತಂದೆ !
ರೈತರ ಬೆಳೆಗಳಿಗೆ ಸರ್ಕಾರ ಕಾನೂನಾತ್ಮಕ ಬೆಲೆ ನಿಗಧಿಪಡಿಸಬೇಕು. ಮೂರು ಕೃಷಿ ಕಾಯ್ದೆಗಳನ್ನು ಸರ್ಕಾರವು ಕೂಡಲೇ ಹಿಂಪಡಿಯಬೇಕು. ಹೊಳಲ್ಕೆರೆ ತಾಲ್ಲೂಕಿನಲ್ಲಿ 5 ಸಾವಿರ ಎಕರೆ ಭೂಮಿ ಅಮೃತಕಾವಲ್ ಇದ್ದು, ಜಾನುವಾರು ಗಣತಿ ಮಾಡಿಸಿ, ಉಳಿದ ಭೂಮಿಯನ್ನು ರೈತರಿಗೆ ನೀಡಬೇಕು. ಹೊಳಲ್ಕೆರೆ ತಾಲ್ಲೂಕಿನಲ್ಲಿ ಬಗುರ್‌ಹುಕುಂ ಸಮಿತಿಯನ್ನು ರಚನೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ಲೋಲಾಕ್ಷಮ್ಮ, ಶಿವಮೂರ್ತಿ, ನಾಗರಾಜ್, ಪವಿತ್ರ, ಹೆಚ್.ಎನ್.ಅಂಜು, ಅರುಣ್‌ಕುಮಾರ್.ಪಿ.ಸಿ, ವೆಂಕಟೇಶ್, ರಂಗಸ್ವಾಮಿ, ಮಲ್ಲಿಕಾರ್ಜುನ್, ಜಯಲಕ್ಷ್ಮೀ, ಶಕುಂತಲ, ಮಂಜುಳ ಕೊಳಹಾಳ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

