CHITRADURGA NEWS | 19 JULY 2025
ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರುಗಳಿಗೆ ಹಾಗೂ ನೇಕಾರಿಕೆಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಪ್ರಸಕ್ತ ಸಾಲಿನ ನೇಕಾರರ ಸಮ್ಮಾನ್ ಯೋಜನೆಯಡಿ ವಾರ್ಷಿಕವಾಗಿ ರೂ.5,000 ಗಳ ಆರ್ಥಿಕ ನೆರವು ನೀಡಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
2024-25ನೇ ಸಾಲಿನಲ್ಲಿ ನೇಕಾರರ ಸಮ್ಮಾನ್ ಯೋಜನೆಯಡಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ ವೃತ್ತಿ ಬಿಟ್ಟಿರುವ ಮತ್ತು ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ನೇಕಾರರ ವಿವರಗಳನ್ನು ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ, ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯೂನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗ ಕಚೇರಿಗೆ ಆಗಸ್ಟ್ 16ರೊಳಗಾಗಿ ವಿವರಗಳನ್ನು ಸಲ್ಲಿಸುವುದು.
ಕಳೆದ ಸಾಲಿನಲ್ಲಿ ನೊಂದಣೆಯಾಗದೇ ಇರುವ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಹೊಸದಾಗಿ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನೇಕಾರರ ಗುರುತಿನ ಚೀಟಿ, ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಪೋಟೋ ಪ್ರತಿ ಹಾಗೂ ನೇಕಾರಿಕೆ ವೃತ್ತಿಯಲ್ಲಿ ಪಡೆಯುತ್ತಿರುವ ವಿವರಗಳೊಂದಿಗೆ ಆಗಸ್ಟ್ 30ರೊಳಗಾಗಿ ಹೊಸದಾಗಿ ಅರ್ಜಿ ಸಲ್ಲಿಸುವುದು.
ಇದನ್ನೂ ಓದಿ: ಗರ್ಭಿಣಿ ಸ್ಕ್ಯಾನಿಂಗ್ ಹೊಸ ರೂಲ್ಸ್ | ಇನ್ನುಮುಂದೆ ಎಸ್ಸೆಸ್ಸೆಲ್ಸಿ ಹಾಗೂ ಜನ್ಮದೃಢೀಕರಣ ಪತ್ರ ಕಡ್ಡಾಯ
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬಿ.ಡಿ.ರಸ್ತೆ, ಯೂನಿಯನ್ ಪಾರ್ಕ್ ಹತ್ತಿರ, ಮಸೀದಿ ಪಕ್ಕ, ಚಿತ್ರದುರ್ಗಯ ಕಚೇರಿ ದೂರವಾಣಿ ಸಂಖ್ಯೆ 08194-221426 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

