
CHITRADURGA NEWS | 18 NOVEMBER 2025
ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆಗೆ ತೆರಳುವ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಕಟ್ಟಡದ ಮುಂಭಾದ ವಿದ್ಯುತ್ ಪರಿವರ್ತಕ(ಟ್ರಾನ್ಸ್‌ಫರ್ಮರ್)ದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಆತಂಕ ಆತಂಕ ಮೂಡಿಸಿತ್ತು.

ಗಾಯತ್ರಿ ವೃತ್ತದಿಂದ ಜೆಸಿಆರ್‌ಗೆ ಹೋಗುವ ಮಾರ್ಗದಲ್ಲಿ ಪ್ರಗತಿ ಆಸ್ಪತ್ರೆ ಮುಂಭಾಗದ ಖಾಸಗಿ ಕಟ್ಟಡಕ್ಕೆ ಸಂಬಂಧಿಸಿದ ವಿದ್ಯುತ್ ಪರಿವರ್ತಕದಲ್ಲಿ ತಾಂತ್ರಿಕ ಕಾರಣಕ್ಕೆ ಬೆಂಕಿ ಕಾಣಿಸಿಕೊಂಡಿತ್ತು.
ಇದನ್ನೂ ಓದಿ: ಹಿರಿಯೂರು ತಾಲೂಕಿನಲ್ಲಿ ಕೆಇಬಿ ಸ್ಟೇಷನ್ | ವಿಕಾಸಸೌಧದಲ್ಲಿ ಸಚಿವ ಡಿ.ಸುಧಾಕರ್ ಸಭೆ
ರಸ್ತೆ ಬದಿಯಲ್ಲೇ ವಿದ್ಯುತ್ ಪರಿವರ್ತಕ ಅಳವಡಿಸಿದ್ದು, ಬೆಂಕಿಯಿಂದ ಬ್ಲಾಸ್ಟ್ ಆದರೆ ಎನ್ನುವ ಕಳವಳ ಮನೆ ಮಾಡಿತ್ತು. ಈ ವೇಳೆ ಸಾರ್ವಜನಿಕರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ.
ವಿದ್ಯುತ್ ಕಡಿತಗೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
