
CHITRADURGA NEWS | 02 JULY 2026
ಚಿತ್ರದುರ್ಗ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಗುರುವಾರ ನಗರದ ಕೈಗಾರಿಕಾ ಪ್ರದೇಶದ ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್‌ನಲ್ಲಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ ನಡೆಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | 10 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
ಈ ವೇಳೆ ಕೈಗಾರಿಕೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಸ್ಪಂದನೆ ಕಾರ್ಯಗಳು, ಕೈಗಾರಿಕೆಗಳಲ್ಲಿರುವ ಅಗ್ನಿಶಾಮಕ ಉಪಕರಣಗಳ ಬಳಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯೊಂದಿಗೆ ಹೇಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕರಿಗೆ ತರಬೇತಿ ನೀಡಲಾಯಿತು.
ಅಗ್ನಿ ದುರಂತದಲ್ಲಿ ಸಿಲುಕಿದ ಗಾಯಾಳುಗಳ ರಕ್ಷಣೆ ಹಾಗೂ ಪ್ರಥಮ ಚಿಕಿತ್ಸಾ ಕಾರ್ಯಗಳ ಬಗ್ಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಎಸ್.ಡಿ.ಆರ್.ಎಫ್ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಅಣಕು ಪ್ರದರ್ಶನ ನೀಡಲಾಯಿತು.
ಇದನ್ನೂ ಓದಿ: ನ್ಯಾಯಾಂಗ ತರಬೇತಿಗೆ ಅರ್ಜಿ ಅಹ್ವಾನ
ಈ ವೇಳೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವ್ಹಿ ಅಗಡಿ, ಅಗ್ನಿಶಾಮಕ ಠಾಣಾಧಿಕಾರಿ ನರೇಂದ್ರ, ಎಸ್.ಡಿ.ಆರ್.ಎಫ್ ಸಬ್ ಇನ್ಸಪೆಕ್ಟರ್ ಇಮ್ರಾನ್ ಖುರೇಶಿ, ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್‌ನ ಮಾಲತಿ ಮತ್ತು ಶಶಿಕಲ ಹಾಗೂ ಕಾರ್ಮಿಕರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

