CHITRADURGA NEWS | 22 MARCH 2026
ಹೊಳಲ್ಕೆರೆ: ಬೇಸಿಗೆಯಲ್ಲಿ ಆಕಸ್ಮಿಕ ಬೆಂಕಿ ತಗಲುವುದರಿಂದ ರೈತರು ನಷ್ಟ ಅನುಭವಿಸಬಾರದೆಂದು ಅಗ್ನಿಶಾಮಕ ಠಾಣೆ ಮಂಜೂರು ಮಾಡಿಸಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ
2.18 ಕೋಟಿ ರೂ.ವೆಚ್ಚದಲ್ಲಿ ಭರಮಸಾಗರದಲ್ಲಿ 2 ನೇ ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಮಾಡುವುದು ಕಷ್ಟ. ಆದರೂ ಸರ್ಕಾರದಿಂದ ಮಂಜೂರು ಮಾಡಿಸಿದ್ದೇನೆ. ಬೇಸಿಗೆ ಕಾಲದಲ್ಲಿ ಬಣವೆ, ಹೊಲ, ತೋಟಗಳಿಗೆ ಬೆಂಕಿ ಬಿದ್ದು, ರೈತರು ನಷ್ಟ ಅನುಭವಿಸುವುದನ್ನು ನೋಡಿದ್ದೇನೆ. ಅದಕ್ಕಾಗಿ ಮತ್ತೊಂದು ಅಗ್ನಿಶಾಮಕ ಠಾಣೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ರೈತರಿಗೆ ಅತ್ಯವಶ್ಯಕವಾಗಿರುವ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿದ್ದೇನೆ. 250 ರಿಂದ 300 ಕೋಟಿ ರೂ.ಗಳನ್ನು ಖರ್ಚು ಮಾಡಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಸೂಳೆಕೆರೆ ನೀರು ಎಲ್ಲೆಲ್ಲಿ ಸರಬರಾಜಿಲ್ಲವೋ ಅಂತಹ ಹಳ್ಳಿಗಳಿಗೆ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ಕೊಟ್ಟಿದ್ದೇನೆ. ಯಾವ ಊರಿಗೆ ಏನು ಕೊಟ್ಟರೆ ರೈತರಿಗೆ, ಜನಸಾಮಾನ್ಯರಿಗೆ ಒಳ್ಳೆಯದಾಗುತ್ತದೆನ್ನುವುದನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ ಎಂದರು.
ಇದನ್ನೂ ಓದಿ: ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
ಜಿಲ್ಲೆಯಲ್ಲಿಯೇ ಎಲ್ಲೂ ಇಲ್ಲದಂತ ಸಂದರ್ಭದಲ್ಲಿ ಪ್ರಥಮ ಬಾರಿಗೆ ಭರಮಸಾಗರದಲ್ಲಿ ಐ.ಟಿ.ಐ.ಕಾಲೇಜು ಕಟ್ಟಿಸಿದ್ದೇನೆ. ಶಾಲಾ-ಕಾಲೇಜು ಕಟ್ಟಡ, ರಸ್ತೆ, ಕುಡಿಯುವ ನೀರು, ಹೀಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದ್ದೇನೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪಿ.ಯು.ಸಿ.ಕಾಲೇಜು ಕೂಡ ಆರಂಭಿಸಲಾಗುವುದೆಂದರು.
ಕೋಗುಂಡೆ, ಹುಲ್ಲೇಹಾಳ್‍ನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡಿಸಿದ್ದೇನೆ. ಎಲ್.ಕೆ.ಜಿ.ಯಿಂದ ಹಿಡಿದು ಪಿ.ಯು.ಸಿ.ವರೆಗೆ ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅನುಕೂಲವಾಗುತ್ತದೆ. ನುರಿತ ಶಿಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಬಾಳೆಹಣ್ಣು, ಪೌಷ್ಟಿಕಾಂಶವುಳ್ಳ ಕಾಳುಗಳು, ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್ ನೀಡಿ ಸಂಜೆ ಮಕ್ಕಳನ್ನು ಅವರವರ ಮನೆಗೆ ಸುರಕ್ಷಿತವಾಗಿ ತಲುಪಿಸಲು ಉಚಿತ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇನ್ನು ಐದಾರು ತಿಂಗಳಲ್ಲಿ ಅಗ್ನಿಶಾಮಕ ಠಾಣೆ ಕಟ್ಟಡವನ್ನು ಪೂರ್ಣಗೊಳಿಸಲಾಗುವುದೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು
ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಮಂಡಲದ ಮಾಜಿ ಅಧ್ಯಕ್ಷ ಶೈಲೇಶ್, ಡಿ.ಎಸ್.ಪ್ರವೀಣ್‍ಕುಮಾರ್, ಮಂಜುನಾಥ್, ಕಲ್ಲೇಶ್, ಮೋಹನ್, ರಾಜಣ್ಣ, ಕೊಟ್ರೇಶ್, ಲೋಲಾಕ್ಷಮ್ಮ, ತಿಪ್ಪೇಶ್, ಅಂಜಿ, ಅರುಣ್‍ಕುಮಾರ್, ತಿಪ್ಪಣ್ಣ, ಬಸವರಾಜ್, ಅಗ್ನಿಶಾಮಕ ಅಧಿಕಾರಿಗಳಾದ ಸೋಮಶೇಖರ್, ನಾಗೇಶ್ ಹಾಗೂ ಗ್ರಾಮದ ಪ್ರಮುಖರು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

