CHITRADURGA NEWS | 01 AUGUST 2024
ಚಿತ್ರದುರ್ಗ: ಆಕಸ್ಮಿಕ ಬೆಂಕಿ ಅನಾಹುತದಿಂದ ಮೂರು ಗುಡಿಸಲು, ಒಂದು ಹಸು ಸುಟ್ಟು ಕರಕಲಾಗಿರುವ ಘಟನೆ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಮುಂಗುಸುವಳ್ಳಿಯಲ್ಲಿ ನಡೆದಿದೆ.
ಮುಂಗುಸುವಳ್ಳಿಯ ಗೋವಿಂದಪ್ಪ, ಚಿಕ್ಕಣ್ಣ ಮತ್ತು ಶಿವಣ್ಣ ಅವರ ವಾಸದ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ. ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ.
ಇದನ್ನೂ ಓದಿ: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ | ವಿದ್ಯಾರ್ಥಿ ನಿಲಯದಲ್ಲಿ ಘಟನೆ
ಬೆಂಕಿ ತೀವ್ರತೆಗೆ ಗುಡಿಸಲಿನಲ್ಲಿದ್ದ ಆಹಾರ ಪದಾರ್ಥ, ಕಾಗದ ಪತ್ರ, ಗೃಹೋಪಯೋಗಿ ವಸ್ತು, ಬಂಗಾರ ಹಾಗೂ ನಗದು ಸುಟ್ಟು ಹೋಗಿದ್ದು, ಮೂರು ಕುಟುಂಬಗಳು ಬೀದಿಗೆ ಬಿದ್ದಿವೆ. ಗೋವಿಂದಪ್ಪನವರ ಗುಡಿಸಲಿನ ಹಿಂದೆ ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಮೃತಪಟ್ಟಿದೆ. ಗ್ರಾಮಸ್ಥರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಅಬ್ಬಿನಹೊಳೆ ಪಿಎಸ್‌ಐ ಬಾಹುಬಲಿ ಎಂ.ಪಡನಾಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
