
CHITRADURGA NEWS | 04 MARCH 2026
ಚಿತ್ರದುರ್ಗ: ಅಪಘಾತ, ವಿಪತ್ತುಗಳು ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಗಾಯಾಳುಗಳಿಗೆ ನೀಡುವ ಪ್ರಥಮ ಚಿಕಿತ್ಸೆಯು ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಪವಿಭಾಗಾಧಿಕಾರಿ ಡಾ. ಕಾಂತರಾಜ್ ತಿಳಿಸಿದರು.
ಇದನ್ನೂ ಓದಿ: ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ | WhatsApp ಸಹಾಯವಾಣಿ ವಿವರ ಇಲ್ಲಿದೆ…
ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ವತಿಯಿಂದ ಸೋಮವಾರ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪಗಳು ಅಥವಾ ಆಕಸ್ಮಿಕ ಅವಘಡಗಳು ಸಂಭವಿಸಿದಾಗ ಗಾಬರಿಯಾಗದೆ, ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುವುದು ಮುಖ್ಯ. ಈ ನಿಟ್ಟಿನಲ್ಲಿ ಸ್ವಯಂಸೇವಕರು ವೈಜ್ಞಾನಿಕ ತರಬೇತಿ ಪಡೆದಿರಬೇಕು ಎಂದು ಅವರು ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಸಂತೋಷ್ ಉಜ್ಜನಪ್ಪ ಹಾಗೂ ವಿಪತ್ತು ನಿರ್ವಹಣೆ ತರಬೇತುದಾರ ಅಜ್ಮಲ್ ಶಕೀಬ್ ಅವರು ಪ್ರಥಮ ಚಿಕಿತ್ಸೆಯ ವಿವಿಧ ಹಂತಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.
ಇದನ್ನೂ ಓದಿ: ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ
ಕಾರ್ಯಕ್ರಮದಲ್ಲಿ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ. ಕರಿಯಪ್ಪ ಮಾಳಿಗೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ, ಮುಖಂಡರಾದ ಗುರುಮೂರ್ತಿ ಹಾಗೂ ಶ್ರೀನಿವಾಸ್ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
