
CHITRADURGA NEWS | 29 OCTOBER 2025
ಚಿತ್ರದುರ್ಗ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ತಾಲ್ಲೂಕಿನ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರತ್ಯುಷ ಅವರು ಬಾಲಕಿಯರ ವಿಭಾಗದ 100 ಮೀ ಹರ್ಡಲ್ಸ್ ನಲ್ಲಿ ಪ್ರಥಮ ಹಾಗೂ 400 ಮೀ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಮೆಕ್ಕೆಜೋಳ ರೇಟ್ ಎಷ್ಟಿದೆ?

ವಿದ್ಯಾರ್ಥಿನಿಯ ಈ ಸಾಧನೆಗೆ ಉಪವಿಭಾಗಾಧಿಕಾರಿ ಮಹಿಬೂಬ್ ಜೀಲಾನಿ ಖುರೇಷಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ವಸತಿ ಶಾಲೆಯ ಪ್ರಾಂಶುಪಾಲ ಎನ್.ಮಂಜುನಾಥ ರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
