
CHITRAUDRGA NEWS | 29 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ರಸಪ್ರಶ್ನೆ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ.
ಇದನ್ನೂ ಓದಿ: ಬ್ಯಾಂಕ್ ಠೇವಣಿಗಳ ವಸೂಲಿ ಮಾಡಲು ವಿಶೇಷ ಶಿಬಿರ | ಡಾ.ಎಸ್.ಆಕಾಶ್

2025-26ನೇ ಸಾಲಿನ ರಾಜ್ಯಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆಗಳು ಇತ್ತೀಚೆಗೆ ಗದಗದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕಿನ ಚವಲಿಹಳ್ಳಿ ಗೊಲ್ಲರಹಟ್ಟಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಗಳಾದ ಜೆ.ತನುಜ, ಕೆ.ವಸುಂಧರ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಚ್ಯ ಇಲಾಖೆಯ ಆಯುಕ್ತ ದೇವರಾಜ್ ಅವರಿಂದ ರೂ.30 ಸಾವಿರ ಮೊತ್ತದ ಚೆಕ್ ವಿತರಿಸಿದರು.
ಇದನ್ನೂ ಓದಿ: ಹೆಗ್ಗೆರೆ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿಗೆ ಕ್ರಮ | ಜಿ.ಪಂ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಮಾರ್ಗದರ್ಶಿ ಶಿಕ್ಷಕರಾದ ಟಿ.ಎಂ.ಮಲ್ಲಿಕಾರ್ಜುನ್, ಮುಖ್ಯ ಶಿಕ್ಷಕ ಆರ್.ನಾಗೇಂದ್ರಪ್ಪ, ವಿಷಯ ಪರಿವೀಕ್ಷಕ ಕೆ.ಜೆ.ಪ್ರಶಾಂತ್, ಜಿಲ್ಲಾ ಸಮಾಜ ವಿಜ್ಞಾನ ಕ್ಲಬ್‍ನ ಅಧ್ಯಕ್ಷ ಬಿ.ಟಿ.ವೀರಭದ್ರಪ್ಪ, ಕಾರ್ಯದರ್ಶಿ ಪ್ರಭುಶಂಕರ್ ಪ್ರಸಾದ್ ಅಭಿನಂದನೆ ಸಲ್ಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
