CHITRADURGA NEWS | 19 SEPTEMBER 2026
ಚಿತ್ರದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ 17 ವರ್ಷದೊಳಗಿನವರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧೀನದ ಎ.ಭೀಮಪ್ಪನಾಯಕ ಸಂಯುಕ್ತ ಪ್ರೌಢಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿಂದು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನ
ಇದೇ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಫುಟ್‌ಬಾಲ್‌ನಲ್ಲಿ ಪ್ರಥಮ ಹಾಗೂ ಹಾಕಿಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್, ಆಡಳಿತಾಧಿಕಾರಿ ಸಾಗರ್ ಎಸ್., ದೈಹಿಕ ಶಿಕ್ಷಕ ಹಾಲೇಶ್, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಸಂಸ್ಥೆಯ ಎಲ್ಲ ಶಾಲಾ-ಕಾಲೇಜು ಸಿಬ್ಬಂದಿ ಅಭಿನಂದಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

