CHITRADURGA NEWS | 16 JUNE 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಹಾರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ಸೀಟುಗಳಿಗೆ 11ನೇ ತರಗತಿಯ ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಉಚಿತ ಬಸ್ ಪಾಸ್ | ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಜನ್ಮ ದಿನಾಂಕವು 01.06.2009 ರಿಂದ 31.07.2011 ರ ನಡುವೆ ಇರಬೇಕು. ಅಭ್ಯರ್ಥಿಯು 2025-26ರ ಶೈಕ್ಷಣಿಕ ಅವಧಿಯಲ್ಲಿ ಜೆ.ಎನ್.ವಿ ಇರುವ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಲ್ಲದೆ, 10ನೇ ತರಗತಿಯಲ್ಲಿ ಕನಿಷ್ಠ ಶೇ.60 ಅಥವಾ ಅದಕ್ಕಿಂತ ಹೆಚ್ಚಿನ ಪ್ರಥಮ ದರ್ಜೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ಅಭ್ಯರ್ಥಿಗಳು 10ನೇ ತರಗತಿಯ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಹೊಂದಿರಬೇಕಿರುವುದು ಕಡ್ಡಾಯವಾಗಿದೆ.
ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಲ್ಲಿಸಲು 2026ರ ಜೂನ್ 25 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಸಭೆಗೆ ಜಿ.ಎಚ್.ತಿಪ್ಪಾರೆಡ್ಡಿ ಚಾಲನೆ
ಹೆಚ್ಚಿನ ಮಾಹಿತಿ ಹಾಗೂ ಪ್ರವೇಶ ಪ್ರಕ್ರಿಯೆಗಾಗಿ ಆಸಕ್ತರು ಮೊಬೈಲ್ ಸಂಖ್ಯೆಗಳಾದ 8301968144, 8618537422, 9740133395, 8453091534 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜವಹಾರ್ ನವೋದಯ ವಿದ್ಯಾಲಯ ಪ್ರಾಚಾರ್ಯರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

