
CHITRADURGA NEWS | 26 MAY 2026
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಸತಿ ಪದವಿ ಪೂರ್ವ ಕಾಲೇಜುಗಳ 2026-27ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಪ್ರಥಮ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮೇ.27ರಂದು ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್ | 81.10 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ | ರೈತರ ಖಾತೆಗೆ ಜಮಾ
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಪದವಿ ಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿಗಾಗಿ ಈ ಪ್ರಕ್ರಿಯೆ ನಡೆಯಲಿದೆ.
ಮೇ 27ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗದ ಕುಂಚಿಗನಾಳು ರಸ್ತೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.
ಮೊದಲ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ತಪ್ಪದೆ ನಿಗದಿಪಡಿಸಿದ ಸಮಯಕ್ಕೆ ಕೌನ್ಸಿಲಿಂಗ್‍ಗೆ ಹಾಜರಾಗಬೇಕು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
ಒಂದು ವೇಳೆ ನಿಗದಿತ ಸಮಯದಲ್ಲಿ ಗೈರುಹಾಜರಾಗುವ ವಿದ್ಯಾರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು ಹಾಗೂ ಆ ಸ್ಥಾನಗಳನ್ನು ಆಯ್ಕೆ ಪಟ್ಟಿಯಲ್ಲಿನ ನಂತರದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

