ಪ್ರಥಮ ಪಿಯುಸಿ | ವಸತಿ ಪದವಿ ಪೂರ್ವ ಕಾಲೇಜುಗಳ ಪ್ರವೇಶಾತಿ ಆಯ್ಕೆ ಪಟ್ಟಿ ಪ್ರಕಟ

AI IMAGE

CHITRADURGA NEWS | 29 MAY 2025 

ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಸೇವಾಸಿಂಧು ತಂತ್ರಾಂಶದಲ್ಲಿ ಕಳೆದ ಮೇ 03 ರಿಂದ 22 ರವರೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಸುತ್ತಿನ ಆಯ್ಕೆಪಟ್ಟಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಪ್ರಕಟಿಸಲಾಗಿದೆ.

Also Read: ರೈಲ್ವೆ ಇಲಾಖೆ | ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ಆಯ್ಕೆಪಟ್ಟಿಯಲ್ಲಿರು ವಿದ್ಯಾರ್ಥಿಗಳು ಪ್ರವೇಶಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜುಗಳಿಗೆ ಇದೇ ಮೇ31ರ ಸಂಜೆ 5 ಗಂಟೆಯೊಳಗೆ ಪ್ರವೇಶ ಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು, ಜಿಲ್ಲಾ ಕಚೇರಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
6 Comments

Leave a Reply

Your email address will not be published. Required fields are marked *

Exit mobile version