By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಪ್ರಾಪ್ತೆಯ ಮೇಲೆ ಅತ್ಯಾಚಾರ | ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಪ್ರಾಪ್ತೆಯ ಮೇಲೆ ಅತ್ಯಾಚಾರ | ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ತಾಲೂಕುಮುಖ್ಯ ಸುದ್ದಿಹೊಸದುರ್ಗ

ಅಪ್ರಾಪ್ತೆಯ ಮೇಲೆ ಅತ್ಯಾಚಾರ | ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

chitradurganews.com
Last updated: 17 November 2023 15:40
chitradurganews.com
2 years ago
Share
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಚಾಕೊಲೇಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಚಿತ್ರದುರ್ಗ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) 5ವರ್ಷ ಕಠಿಣ ಸಜೆ ವಿಧಿಸಿ ಆದೇಶ ಮಾಡಿದೆ.

ಹೊಸದುರ್ಗ ತಾಲೂಕಿನ ಅತ್ತಿಮಗ್ಗೆ ಗ್ರಾಮದ ಆರೋಪಿ ತಿಮ್ಮಯ್ಯ 2022 ನವೆಂಬರ್‌ 2 ರಂದು ಅಪ್ರಾಪ್ತ ಬಾಲಕಿಗೆ ಚಾಕೊಲೇಟ್ ನೀಡುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಂ.ಡಿ.ಫೈಜುಲ್ಲಾ ತನಿಖೆ ನಡೆಸಿ ಆರೋಪಿ ವಿರುದ್ಧ ಕಲಂ ನಂ.376(A.B) ಐಪಿಸಿ ಮತ್ತು ಕಲಂ 4, 6 ಪೋಕ್ಸೋ ಕಾಯ್ದೆ ಅಡಿ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಆರೋಪಿ ತಿಮ್ಮಯ್ಯನಿಗೆ ಕಲಂ ನಂ.10 ಪೋಕ್ಸೊ ಕಾಯ್ದೆಯಡಿ 5 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ನೊಂದ ಬಾಲಕಿಗೆ 10 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿ ನ.17 ರಂದು ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaCourtHosadurgajailPOCSO ActPolicepunishmentಚಿತ್ರದುರ್ಗಜೈಲುಶಿಕ್ಷೆನ್ಯಾಯಾಲಯಪೊಲೀಸ್ಪೋಕ್ಸೊಹೊಸದುರ್ಗ
Share This Article
Facebook Email Print
Previous Article ಕಿಡಿಗೇಡಿಗಳಿಂದ ಅಡಿಕೆ ತೋಟಕ್ಕೆ ಬೆಂಕಿ ಕಿಡಿಗೇಡಿಗಳಿಂದ ಅಡಿಕೆ ತೋಟಕ್ಕೆ ಬೆಂಕಿ | ಹಿರಿಯೂರು ತಾಲೂಕಿನಲ್ಲಿ ಘಟನೆ
Next Article ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಡೀಪ್‍ಫೇಕ್ ಬಗ್ಗೆ ನಿರ್ಲಕ್ಷ್ಯ ಬೇಡ | ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up