
ಚಿತ್ರದುರ್ಗ ನ್ಯೂಸ್.ಕಾಂ: ಚಾಕೊಲೇಟ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಮಾಡಿದ್ದ ಆರೋಪಿಗೆ ಚಿತ್ರದುರ್ಗ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) 5ವರ್ಷ ಕಠಿಣ ಸಜೆ ವಿಧಿಸಿ ಆದೇಶ ಮಾಡಿದೆ.
ಹೊಸದುರ್ಗ ತಾಲೂಕಿನ ಅತ್ತಿಮಗ್ಗೆ ಗ್ರಾಮದ ಆರೋಪಿ ತಿಮ್ಮಯ್ಯ 2022 ನವೆಂಬರ್ 2 ರಂದು ಅಪ್ರಾಪ್ತ ಬಾಲಕಿಗೆ ಚಾಕೊಲೇಟ್ ನೀಡುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.
ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಎಂ.ಡಿ.ಫೈಜುಲ್ಲಾ ತನಿಖೆ ನಡೆಸಿ ಆರೋಪಿ ವಿರುದ್ಧ ಕಲಂ ನಂ.376(A.B) ಐಪಿಸಿ ಮತ್ತು ಕಲಂ 4, 6 ಪೋಕ್ಸೋ ಕಾಯ್ದೆ ಅಡಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಆರೋಪಿ ತಿಮ್ಮಯ್ಯನಿಗೆ ಕಲಂ ನಂ.10 ಪೋಕ್ಸೊ ಕಾಯ್ದೆಯಡಿ 5 ವರ್ಷ ಕಠಿಣ ಸಜೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಕರಣದಲ್ಲಿ ನೊಂದ ಬಾಲಕಿಗೆ 10 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿ ನ.17 ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ವಾದ ಮಂಡಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
