By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸರಸ್ವತಿ ಕಾನೂನು ಕಾಲೇಜು
    ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
    2 hours ago
    ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ
    ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಜೀವನ ಸಾಧ್ಯ | ಎಸ್. ಬಸವರಾಜು
    2 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    3 hours ago
    ಮಸ್ಟರಿಂಗ್ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ
    ಪದವೀಧರ ಕ್ಷೇತ್ರದ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 55 ಮತಗಟ್ಟೆ ಸಿದ್ಧ
    3 hours ago
    ಶ್ರೀ ಮಧ್ವಾಚಾರ್ಯರ ಜಯಂತಿ ಕಾರ್ಯಕ್ರಮ
    ಮಧ್ವಾಚಾರ್ಯರ ತತ್ವಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ | ADC ಬಿ.ಟಿ.ಕುಮಾರಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    5 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    15 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 19 | ಕೈಗೆತ್ತಿಕೊಂಡ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    5 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    13 hours ago
    hemoglobin
    ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗಲು ಈ ಆಹಾರಗಳನ್ನು ಮಿಕ್ಸ್ ಮಾಡಿ ತಿನ್ನಿ
    14 hours ago
    chicken
    ಕೋಳಿಯ ಈ ಭಾಗವನ್ನು ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    taking the tablet
    ಟ್ಯಾಬ್ಲೆಟ್ ತೆಗೆದುಕೊಳ್ಳುವಾಗ ಎಷ್ಟು ನೀರು ಕುಡಿಯಬೇಕು? ತಿಳಿಯಿರಿ
    2 days ago
    hair grow darker and thicker
    ಕೂದಲು ಕಪ್ಪಾಗಿ ದಪ್ಪವಾಗಿ ಬೆಳೆಯಲು ಈ ಹೇರ್ ಪ್ಯಾಕ್ ಹಚ್ಚಿ
    3 days ago
Reading: ಜಾನಪದ ಸಾಹಿತ್ಯವು ಸಂಸ್ಕೃತಿ, ಪರಂಪರೆಯ ಉಳಿವಿಗೆ ಪೂರಕ | ಗುರು ಬಸವ ಮಹಾಸ್ವಾಮಿಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾನಪದ ಸಾಹಿತ್ಯವು ಸಂಸ್ಕೃತಿ, ಪರಂಪರೆಯ ಉಳಿವಿಗೆ ಪೂರಕ | ಗುರು ಬಸವ ಮಹಾಸ್ವಾಮಿಗಳು

News Desk Chitradurga News
Last updated: 21 October 2026 19:26
News Desk Chitradurga News
1 day ago
Share
ಜಾನಪದ ಸಮಾವೇಶ
ಜಾನಪದ ಸಮಾವೇಶ
SHARE

CHITRADURGA NEWS | 21 OCTOBER 2206

ಚಿತ್ರದುರ್ಗ: ಜಾನಪದ ಸಾಹಿತ್ಯವು ಕನ್ನಡ ಸಾಹಿತ್ಯ ಹಾಗೂ ವಚನ ಸಾಹಿತ್ಯದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ನಮ್ಮ ಸಂಸ್ಕೃತಿ, ಪರಂಪರೆ, ಧರ್ಮ, ಬಾಂಧವ್ಯ ಮತ್ತು ಜೀವನ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರು ಬಸವ ಮಹಾಸ್ವಾಮಿಗಳು ಹೇಳಿದರು.

ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಾಲ್ಮೀಕಿ ಜಯಂತಿ ಸರಳ ಆಚರಣೆಗೆ ಸೂಚನೆ

ನಗರದ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ–2026ರ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಜಾನಪದ ಸಮಾವೇಶದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಮಹಿಳೆಯರ ಮೂಲಕ ಬಾಯಿಂದ ಬಾಯಿಗೆ ಹರಿದು ಬಂದಿರುವ ಜಾನಪದ ಹಾಡುಗಳು ಜನಜೀವನದ ಅನುಭವ, ನೀತಿ, ಧರ್ಮ ಹಾಗೂ ಸಾಮಾಜಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತವೆ. ಅಕ್ಷರ ಜ್ಞಾನವಿಲ್ಲದ ಅನೇಕ ಮಹಿಳೆಯರು ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಈ ಪರಂಪರೆಯನ್ನು ತಲೆಮಾರಿನಿಂದ ತಲೆಮಾರಿಗೆ ಉಳಿಸಿಕೊಂಡು ಬಂದಿದ್ದಾರೆ. ಜಾನಪದ ಸಾಹಿತ್ಯವು ಲಿಖಿತ ದಾಖಲೆಗಳಿಗಿಂತ ಜನರ ನಾಲಿಗೆಯಲ್ಲಿ ಜೀವಂತವಾಗಿರುವ ಸಾಹಿತ್ಯವಾಗಿದೆ ಎಂದರು.

ಬಸವಣ್ಣನವರು ಜಾತಿ-ಭೇದಗಳನ್ನು ಮೀರಿ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್ ಶರಣರು. ಅವರ ಆದರ್ಶಗಳು ಜಾನಪದ ಗೀತೆಗಳಲ್ಲಿಯೂ ಪ್ರತಿಬಿಂಬಿಸುತ್ತವೆ. ಸಂಪತ್ತಿಗಿಂತ ಮಾನವೀಯ ಸಂಬಂಧಗಳಿಗೆ ಹೆಚ್ಚಿನ ಬೆಲೆ ನೀಡಬೇಕು. ನಮ್ಮ ಮಾತುಗಳು ಮುತ್ತಿನಂತಿರಬೇಕು, ಇತರರ ಮನಸ್ಸಿಗೆ ನೋವುಂಟು ಮಾಡಬಾರದು. ಉತ್ತಮ ಗುಣ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ | ಹುತಾತ್ಮರ ತ್ಯಾಗ ಸ್ಮರಿಸಿ ಗೌರವ ನಮನ

ಶ್ರೀ ಸಿದ್ದಬಸವ ಕಬೀರಾನಂದ ಸ್ವಾಮೀಜಿಗಳು ಮಾತನಾಡಿ, ಬಸವ ಸಾಹಿತ್ಯದ ಪ್ರಸಾರ ಮತ್ತು ಬೆಳವಣಿಗೆಯಲ್ಲಿ ಪಾಂಡೋಮಟ್ಟಿ ಮಠದ ಪಾತ್ರ ಮಹತ್ವದ್ದಾಗಿದೆ. ಜಾನಪದ ಸಾಹಿತ್ಯವು ಲಿಖಿತ ದಾಖಲೆಗಳಿಲ್ಲದೆ ಜನರ ಮೂಲಕ ತಲೆಮಾರುಗಳಿಂದ ಹರಿದುಬಂದಿದ್ದು, ಅಪಾರ ಜೀವನಾನುಭವ ಮತ್ತು ಸ್ಫೂರ್ತಿಯನ್ನು ಒಳಗೊಂಡಿದೆ. ವಿಶೇಷವಾಗಿ ಮಹಿಳೆಯರಲ್ಲಿ ಆತ್ಮವಿಶ್ವಾಸ ಹಾಗೂ ಬದುಕಿನ ಧೈರ್ಯ ತುಂಬುವ ಶಕ್ತಿ ಇದಕ್ಕಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಜಾನಪದ ಹಾಡುಗಳಿಗೆ ಆಧುನಿಕ ಸಂಗೀತ ಬೆರೆಸುವ ಪ್ರವೃತ್ತಿ ಹೆಚ್ಚಾಗಿದ್ದು, ಇದರಿಂದ ಮೂಲ ಜಾನಪದದ ಸೊಗಡು ಬದಲಾಗುವ ಸಾಧ್ಯತೆಯಿದೆ. ಆದ್ದರಿಂದ ಜಾನಪದ ಹಾಡುಗಳನ್ನು ಮೂಲ ಶೈಲಿಯಲ್ಲಿಯೇ ಹಾಡಿ ಸಂರಕ್ಷಿಸುವುದು ಅಗತ್ಯ. ಜಾನಪದ ಸಾಹಿತ್ಯವು ಜನರಲ್ಲಿ ಜಾಗೃತಿ ಮೂಡಿಸಿ, ಬದುಕನ್ನು ಕಟ್ಟಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣ ದಾಸ್ ಮಾತನಾಡಿ, ಚಿತ್ರದುರ್ಗವು ವೀರರು, ಶೂರರು, ಶರಣರು, ಸಂತರು, ರಾಜರು ಹಾಗೂ ವೀರವನಿತೆಯರು ಜನ್ಮತಾಳಿದ ಪುಣ್ಯಭೂಮಿಯಾಗಿದೆ. ಇಂದಿನ ಮಕ್ಕಳು ಗುರುಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ಈ ನಾಡಿನ ಸಾಂಸ್ಕೃತಿಕ ವೈಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಹೇಳಿ, ತಮ್ಮ ಅನುಭವದ ಜಾನಪದ ಗೀತೆಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ: ಕಸಾಪ ವತಿಯಿಂದ ರಾಜ್ಯ ಮಟ್ಟದ ಕವಿಗೋಷ್ಠಿ

ರವಿಯಡೇಹಳ್ಳಿ ಮಾತನಾಡಿ, ಶ್ರೀಮಠದ ವತಿಯಿಂದ ಬಸವಭಕ್ತಿಯ ಪ್ರಸಾರ ಹಾಗೂ ಬಸವಣ್ಣನವರ ಆದರ್ಶಗಳನ್ನು ಜನರಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಬಸವಣ್ಣನವರ ಆಶಯದಂತೆ ನಮ್ಮ ರಾಜ್ಯ ಕಲ್ಯಾಣ ರಾಜ್ಯವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ದಾವಣಗೆರೆ ಶ್ರೀ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮೀಜಿ, ಶ್ರೀ ಮೋಕ್ಷಪತಿ ಸ್ವಾಮೀಜಿ, ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ನಿಶ್ಚಲಾನಂದ ಸ್ವಾಮೀಜಿ, ಶ್ರೀ ಬಸವ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರತಿನಿಧಿ ಕೆಂಚವೀರಪ್ಪ, ಹಾವೇರಿ ಬಸವ ಬಳಗದ ಅಧ್ಯಕ್ಷ ವಿ.ಜಿ. ಎಳಗೇರಿ, ತಳವಾರ ಸಮಾಜದ ಎಂ. ನಾಗರಾಜ್, ಬಂಜಾರ ಸಮಾಜದ ಎಂ. ಮಂಜನಾಯ್ಕ, ಕಮ್ಮಾರ ಸಮಾಜದ ಎನ್. ಹನುಮಂತಪ್ಪ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಹಾಗೂ ಬಸವ ಕೇಂದ್ರಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಕಲಚೇತನರ ಮಾಸಾಶನ ₹6 ಸಾವಿರಕ್ಕೆ ಹೆಚ್ಚಿಸಲು ಆಗ್ರಹ

ಬೆಂಗಳೂರಿನ ರೈಬೊ ಜನರೇಟರ್ಸ್ ಮಾಲೀಕ ಸುಭಾಷ್ ಸಿ. ಕುಬ್ಸದ ಅವರನ್ನು ಸನ್ಮಾನಿಸಲಾಯಿತು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಕೊಟ್ರೇಶಪ್ಪ ಸ್ವಾಗತಿಸಿದರು. ಶ್ರೀಮತಿ ರವಿಕಲಾ ನಿರೂಪಿಸಿದರು. ಡಾ. ಬಸವಕುಮಾರ ಸ್ವಾಮೀಜಿ ಶರಣ ಸಮರ್ಪಣೆ ಸಲ್ಲಿಸಿದರು.

ಜಾನಪದ ನೃತ್ಯಗಳ ಸಾಂಸ್ಕೃತಿಕ ಸಂಭ್ರಮ

ಸಾಂಸ್ಕೃತಿಕ ಸಂಭ್ರಮದಲ್ಲಿ ಬೆಂಗಳೂರಿನ ನೆಲ ಸೊಗಡು ಸಂಸ್ಥೆಯ ಕಲಾವಿದರು ಕಂಸಾಳೆ, ಯಕ್ಷಗಾನ, ವೀರಗಾಸೆ, ಹಾಲಕ್ಕಿ ಸುಗ್ಗಿ ಕುಣಿತ, ಪಟ ಕುಣಿತ ಹಾಗೂ ಸೋಮನ ಕುಣಿತ ಸೇರಿದಂತೆ ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಗಮನ ಸೆಳೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ಚಿತ್ರದುರ್ಗ, ಕನ್ನಡ ನ್ಯೂಸ್, ಮುರುಘಾ ಮಠ, ಜಾನಪದ ಸಾಹಿತ್ಯ, Chitradurga, Kannada News, Muruga Math, Folk Literature,
Share This Article
Facebook Email Print
Previous Article ಕೆ.ಎಂ.ಶಿವಸ್ವಾಮಿ ಕಸಾಪ ವತಿಯಿಂದ ರಾಜ್ಯ ಮಟ್ಟದ ಕವಿಗೋಷ್ಠಿ
Next Article ಚಿತ್ರದುರ್ಗದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಚಿತ್ರದುರ್ಗದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ | ಹುತಾತ್ಮರ ತ್ಯಾಗ ಸ್ಮರಿಸಿ ಗೌರವ ನಮನ
Leave a Comment

Leave a Reply Cancel reply

Your email address will not be published. Required fields are marked *

ಸರಸ್ವತಿ ಕಾನೂನು ಕಾಲೇಜು
ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
ಮುಖ್ಯ ಸುದ್ದಿ
ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ
ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಜೀವನ ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
ಮುಖ್ಯ ಸುದ್ದಿ
ಮಸ್ಟರಿಂಗ್ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ
ಪದವೀಧರ ಕ್ಷೇತ್ರದ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 55 ಮತಗಟ್ಟೆ ಸಿದ್ಧ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up